ಹೊಸನಗರ: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದಿಂದ ಕೊರೊನಾ ಲಸಿಕೆ ಫಲಾನುಭವಿಗಳ ನೊಂದಣಿ ಅಭಿಯಾನವನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆ ಸರ್ಜನ್ ಡಾ|| ಹೇಮಂತ್ ರವರು ಉದ್ಘಾಟಿಸಿ ಮಾತನಾಡಿ, ಕೋವಿಡ್ ಲಸಿಕೆ ಪಡೆಯುವುದರಿಂದ ಕೊರೊನಾ ಭೀತಿಯಿಂದ ಮುಕ್ತರಾಗಬಹುದು. ಆದರೂ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗದ ಕಾರಣ ಹಿರಿಯ ನಾಗರಿಕರು ಯಾವುದೇ ಭಯ ಭೀತಿಯಿಲ್ಲದೇ ಆಸ್ಪತ್ರೆಗೆ ಬಂದು ಲಸಿಕೆ ಪಡೆಯಬೇಕೆಂದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್.ಆರ್ ದೇವಾನಂದ್, ಜಿಲ್ಲಾ ಬಿಜೆಪಿ ಮುಖಂಡರಾದ ಉಮೇಶ್ ಕಂಚುಗಾರ, ದಿನೇಶ ಆಚಾರ್ಯ, ಎ.ವಿ ಮಲ್ಲಿಕಾರ್ಜುನ್, ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವಟೈಸಿಂಗ್ ಬೋರ್ಡಿನ ನಿರ್ದೇಶಕ ಎಚ್.ಆರ್ ತೀರ್ಥೇಶ್, ತಾಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬೆಳಗೋಡು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನಾಯಕ, ನಾಗರಾಜ ಸ್ವಾಮಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮನೋಧರ, ತಾಲೂಕು ಸಾಮಾಜಿಕ ಜಾಲತಾಣ ಸಂಚಾಲಕ ಅಭಿಷೇಕ್ ಮೊದಲಾದವರು ಉಪಸ್ಥಿತರಿದ್ದರು.