ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದ ಮನೆಯ ಮೇಲ್ಛಾವಣಿ !

0
224

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾರ್ಭಟ ಜೋರಾಗಿದೆ.

ಬಿರುಗಾಳಿ ಸಹಿತ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ವರದಿಯಾಗಿದೆ.

ತಾಲೂಕಿನ ಭಿನ್ನಡಿ ಗ್ರಾಮದ ಸಂದೇಶ್ ಎಂಬುವವರ ಮನೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.

ಇನ್ನೂ ಮೂಡಿಗೆರೆ ತಾಲೂಕಿನ ಹಾರ್ಮಕ್ಕಿ ಗ್ರಾಮದಲ್ಲೂ ಮನೆಯ ಗೋಡೆಗಳು ಕುಸಿದು ಬಿದ್ದಿದ್ದು ಬೈರೇಗೌಡ ಎಂಬುವರಿಗೆ ಸೇರಿದ ಮನೆಗೆ ಹಾನಿಯಾಗಿದೆ.

ಭಾರಿ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಇಂದು ಮೂಡಿಗೆರೆ ತಾಲೂಕಿನ‌ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಜಾಹಿರಾತು

LEAVE A REPLY

Please enter your comment!
Please enter your name here