ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !

0
1703

ಚಿಕ್ಕಮಗಳೂರು: ಬೆಳಂಬೆಳಗ್ಗೆ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಬಳಿಯ ಮತ್ತಾವರ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಮತ್ತಾವರದ ಶಾಂತೇಗೌಡರ ಪುತ್ರ ಪ್ರಕೃತ್ (29) ಎಂದು ಗುರುತಿಸಲಾಗಿದೆ.

ಬೈಕಿನಲ್ಲಿ ತಮ್ಮ ಕಾಫಿ ತೋಟಕ್ಕೆ ಹೋಗಿ ವಾಪಸ್ಸು ಬರುತ್ತಿರುವ ಸಂದರ್ಭದಲ್ಲಿ ಕೊಲೆ ನಡೆದಿದ್ದು, ಈ ಹತ್ಯೆಗೆ ಹರಿತವಾದ ಆಯುಧ ಬಳಸಿ ಪರಿಣಾಮ ಯುವಕನ ತಲೆಗೆ, ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಹಾನಿ ಮಾಡಿ ಆರೋಪಿಗಳು ಪರಾರಿಯಾಗಿದ್ದು ಪ್ರಕೃತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಜಮೀನಿನ ದ್ವೇಷವೆ ಕಾರಣ ಆಗಿರಬಹುದು ಎಂದು ಅನುಮಾನ ವ್ಯಕ್ತವಾಗಿದ್ದು, ಹಬ್ಬದ ದಿನದಂದೆ ಈ ಘಟನೆಯಿಂದ ಕುಟುಂಬದವರು ದಿಗ್ಭ್ರಮೆಗೊಂಡಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದೆ ಎನ್ನಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚಿಂದ್ರ ಹಾಕೆ ಹಾಗೂ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಕೊಟ್ಟು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದತೆ ಮೃತದೇಹವನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಜನ ಆಗಮಿಸಿದರಿಂದ ಗೊಂದಲ ಸೃಷ್ಟಿಯಾಗಿತ್ತು.

ಜಾಹಿರಾತು

LEAVE A REPLY

Please enter your comment!
Please enter your name here