ಬೈಕಿಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು! ಮತ್ತೋರ್ವನಿಗೆ ಗಾಯ

0
2546

ಮೂಡಿಗೆರೆ: ತಾಲ್ಲೂಕಿನ ಗೋಣಿಬೀಡು ಸೇತುವೆ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಮೂಡಿಗೆರೆ ಪಟ್ಟಣದ ಬಿಳಗುಳ ಸುಭಾಷ್ ನಗರ ನಿವಾಸಿ ದಿನೇಶ್ ಸಾವನ್ನಪ್ಪಿದ್ದಾನೆ.

ಹಾಸನ ಮೂಲದ ವ್ಯಕ್ತಿಯ ಕಾರು ಅತಿ ವೇಗವಾಗಿ ಬಂದು ಬೈಕಿಗೆ ಗುದ್ದಿದ್ದರಿಂದ ದಿನೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬೈಕಿನಲ್ಲಿದ್ದ ಮತ್ತೋರ್ವನಿಗೆ ಗಾಯಗಳಾಗಿದ್ದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಅಪಘಾತ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here