ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು !

0
858

ಸೊರಬ: ಬೈಕಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ನಡುವೆ ಗುರುವಾರ ರಾತ್ರಿ ಸಂಭವಿಸಿದೆ.

ಅವಲಗೋಡು ಗ್ರಾಮದ ಯುವರಾಜ್ ಗಣಪತಿ (38) ಮೃತ ಬೈಕ್ ಸವಾರ. ಉಳುವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕಿಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ 112 ಪೊಲೀಸ್ ಸಿಬ್ಬಂದಿ ತೆರಳಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೃತ ಯುವರಾಜ್ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here