ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತನ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತನಾದ ಸೀಗೆಹಟ್ಟಿಯ ಕುಂಬಾರ ಬೀದಿಯ ಹರ್ಷ (28) ಈತನು ಭಾನುವಾರ ರಾತ್ರಿ ಹೋಟೆಲ್ಗೆ ಹೋಗಿ ಊಟ ಮಾಡಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದಾಗ ಯಾರೋ ದುಷ್ಕರ್ಮಿಗಳು ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಎನ್.ಟಿ ರಸ್ತೆ ಕಾಮತ್ ಪೆಟ್ರೋಲ್ ಬಂಕ್ ಎದುರು ಭಾರತೀ ಕಾಲೋನಿ ಕ್ರಾಸ್ನ ರಸ್ತೆಯಲ್ಲಿ ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು.

