ಭದ್ರಾವತಿಯಲ್ಲಿ ಕಡಜದ ಹುಳಗಳ ದಾಳಿಗೆ ಮತ್ತೋರ್ವ ಬಲಿ

0
705

ಭದ್ರಾವತಿ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಕುಮಾರ್(38) ಮೃತಪಟ್ಟಿದ್ದು, ಇವರು ತಮ್ಮ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕಡಜದ ಹುಳುಗಳು ದಾಳಿ ನಡೆಸಿವೆ.

ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಡಜದ ಹುಳುಗಳ ದಾಳಿಗೆ ಇಬ್ಬರು ಬಲಿ !

ಜಾಹಿರಾತು

LEAVE A REPLY

Please enter your comment!
Please enter your name here