ಭಾರತದಲ್ಲಿ ಹೆಣ್ಣು ಮಕ್ಕಳಿಗೆ ತಾಯಿ ಸ್ಥಾನ ನೀಡಿ ಗೌರವಿಸಲಾಗುತ್ತದೆ ; ಡಿ.ಎಸ್. ಅರುಣ್

0
344

ಶಿವಮೊಗ್ಗ: ಭಾರತದಲ್ಲಿ ಹೆಣ್ಣು ಮಕ್ಕಳಿಗೆ ತಾಯಿ ಸ್ಥಾನ ನೀಡಿ ಗೌರವಿಸಲಾಗುತ್ತದೆ. ಹೆಣ್ಣು ಮಕ್ಕಳು ಪುರುಷರಿಗೆ ಸರಿಸಮಾನರಾಗಿ ಸಂಸಾರ ನಿರ್ವಹಿಸುವಲ್ಲಿ ಉನ್ನತ ಪಾತ್ರ ವಹಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದ್ದಾರೆ.

ಜನ ಶಿಕ್ಷಣ ಸಂಸ್ಥೆ ಏರ್ಪಡಿಸಿದ್ದ‌ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ, ವಿವಿಧ ವೃತ್ತಿ ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣೆ ಮತ್ತು ಮಹಿಳಾ ಸಾಧಕಿಯರಿಗೆ ಅಭಿನಂದನಾ ಕಾರ್ಯಕ್ರಮ, ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲೂ ಕೂಡ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದಾರೆ. ನಾವೆಲ್ಲರೂ ಭಾರತ್ ಮಾತಾ ಕೀ ಜೈ ಎಂದು ಹೇಳುತ್ತೇವೆ. ನಮ್ಮ ದೇಶದಲ್ಲಿ ಮಹಿಳೆಯರಿಗೆ‌ ದೇವಿಯ ಸ್ವರೂಪ ನೀಡಿದ್ದೇವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮಾಂತರ ಮಹಿಳೆಯರಿಗೆ ಆಡಳಿತದಲ್ಲಿ ಸಮಾನಾವಕಾಶ ನೀಡಲು ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಶೇ. 50 ಕ್ಕೆ ಏರಿಸಿದರು. ಪ್ರಾಚೀನ ಕಾಲದಿಂದಲೂ ನಮ್ಮ ದೇಶದಲ್ಲಿ ಮಹಿಳೆಯರಿಗೆ ಮಹತ್ವದ ಸ್ಥಾನವಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.

ಜಿ.ಪಂ.ಸಿಇಒ ಎಂ.ಎಲ್.ವೈಶಾಲಿ, ಜನಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರೊ. ಎಸ್.ಬಿ. ಕಮಲಾಕರ್, ನಿರ್ದೇಶಕಿ ಎಸ್.ವೈ. ಅರುಣಾದೇವಿ, ಎಂ. ಸುಮನಾ ಇದ್ದರು.

ಜಾಹಿರಾತು

LEAVE A REPLY

Please enter your comment!
Please enter your name here