ಭಾರತ್ ಬಂದ್ ಯಶಸ್ವಿಗೊಳಿಸಲು ನಿರ್ಧಾರ: ಇದೇ 20 ರಂದು ರೈತ ಜಾಗೃತಿ ಸಭೆ

0
264

ಚಿಕ್ಕಮಗಳೂರು: ಕರಾಳ ಕೃಷಿ ಮಸೂದೆ ವಿರೋಧಿಸಿ ಇದೇ ತಿಂಗಳು 27ರಂದು ಭಾರತ್ ಬಂದ್‌ ಅನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಪಕ್ಷ, ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, ವಿವಿಧ ಪಕ್ಷಗಳ ಮುಖಂಡರು, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಬೆಂಬಲ ಪಡೆಯಲಾಗಿದೆ.

ಕೇಂದ್ರ ಸರ್ಕಾರವು ರೈತರಿಗೆ ಮಾರಕವಾಗಿ ಕೃಷಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ದೆಹಲಿಯ ಗಡಿ ಭಾಗದಲ್ಲಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮರಣ ಶಾಸನದಂತಿರುವ ಕಾಯ್ದೆ ಜಾರಿಗೊಳಿಸಲು ಮುಂದಾಗಿರುವುದನ್ನು ಸಭೆಯಲ್ಲಿ ಖಂಡಿಸಿದ್ದು, ಒಕ್ಕೂಟ ಸರ್ಕಾರದ ನಿಲುವು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ 27ರ ಭಾರತ್ ಬಂದ್‌ ಯಶಸ್ವಿಗೊಳಿಸಲು ನಿರ್ಧರಿಸಲಾಗಿದೆ.

ಸಿಪಿಐ ಮುಖಂಡ ಅಮ್ಜದ್ ಮಾತನಾಡಿ,ಭಾರತ್ ಬಂದ್ ಪ್ರಯುಕ್ತ ಸೆಪ್ಟೆಂಬರ್ 20 ರಂದು ನಗರದ ಎಪಿಎಂಸಿ ಸಭಾಂಗಣದಲ್ಲಿ ರೈತ ಜಾಗೃತಿ ಸಭೆ ಆಯೋಜಿಸಲಾಗಿದ್ದು ರಾಜ್ಯ ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ, ಚಾಮರಸ ಮಾಳಿ ಪಾಟೀಲ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಭಾಗವಹಿಸಲಿದ್ದಾರೆ ಎಂದರು.

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಂ.ಸಿ. ಬಸವರಾಜ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಸಿಪಿಐ ಮುಖಂಡ ರೇಣುಕಾರಾಧ್ಯ, ಡಿಎಸ್‌ಎಸ್‌ನ ಮರ್ಲೆ ಅಣ್ಣಯ್ಯ, ರವೀಶ್ ಕ್ಯಾತನಬೀಡು, ಗುರುಶಾಂತಪ್ಪ, ರೂಬೆನ್ ಮೊಸಸ್, ಡಾ|| ಕೆ.ಸುಂದರಗೌಡ, ಹಿರೇಮಗಳೂರು ಪುಟ್ಟಸ್ವಾಮಿ, ಪ್ರಕಾಶ್, ನಟರಾಜ್, ಜೆಡಿಎಸ್ ಮುಖಂಡ ಚಂದ್ರಪ್ಪ, ಲಕ್ಷಣ್, ಶ್ರೀನಿವಾಸ್, ದೊಡ್ಡಯ್ಯ, ಅಂಗಡಿ ಚಂದ್ರು, ಉಮೇಶ್, ತೇಗೂರು ಜಗದೀಶ್, ಕಳವಾಸೆ ರವಿ, ರಘು, ಸುರೇಶ್ ಈ ಸಭೆಯಲ್ಲಿ ಭಾಗವಹಿಸಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here