ಭಾರೀ ಅಪಘಾತದಿಂದ ತಪ್ಪಿಸಿಕೊಳ್ಳಲು ಹೋಗಿ ನಾಲೆಗೆ ಇಳಿದ ಕಾರು !

0
2128

ತರೀಕೆರೆ: ಭಾರೀ ಅಪಘಾತದಿಂದ ತಪ್ಪಿಸಿಕೊಳ್ಳಲು ಹೋಗಿ ಕಾರೊಂದು ನಾಲೆಗೆ ಇಳಿದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ.

ತಿರುವಿನಲ್ಲಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಬೈಕಿನಿಂದ ಕೆಳಗೆ ಬಿದ್ದಿದ್ದಾರೆ. ಬೈಕಿನಿಂದ ಬಿದ್ದವರಿಗೂ ಏನೂ ಆಗಿರಲಿಲ್ಲ. ನಾಲೆಯಲ್ಲಿ ನೀರು ನಿಲ್ಲಿಸಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಕಾರಿನಲ್ಲಿದ್ದವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here