ಶಿವಮೊಗ್ಗ/ಚಿಕ್ಕಮಗಳೂರು: ಕರ್ನಾಟಕದಲ್ಲಿ ಮಳೆರಾಯ ತನ್ನ ನೈಜರೂಪ ತೋರಿಸ್ತಿದ್ದು ಈಗ ರಾಜ್ಯಕ್ಕೆ ವರುಣನ ಭಯ ಶುರುವಾಗಿದೆ. ಕಳೆದ ಕೆಲ ಗಂಟೆಗಳಿಂದ ಅಬ್ಬರಿಸುತ್ತಿರುವ ಮಹಾಮಳೆಗೆ ಮಲೆನಾಡಿನ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಕರಾವಳಿ ಜಿಲ್ಲೆಗಳು ಕೆರೆಯಂತಾಗಿದ್ದು ಮಲೆನಾಡು ಮಳೆನಾಡಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರೋ ಭಾರಿ ಮಳೆಗೆ ಕರಾವಳಿಯ ಹಲವು ಕಡೆ ನೆರೆ ಉಂಟಾಗಿದೆ. ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ನದಿಗಳು ಅಪಾಯದ ಮಟ್ಟ ತಲುಪಿದ್ದು ನದಿ ಪಾತ್ರದ ಜನರಿಗೆ ಆತಂಕ ಎದುರಾಗಿದೆ.
ಕರಾವಳಿ ಜಿಲ್ಲೆಗಳು ಕೆರೆಯಂತಾಗಿದ್ದು ಮಲೆನಾಡು ಮಳೆನಾಡಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರೋ ಭಾರಿ ಮಳೆಗೆ ಕರಾವಳಿಯ ಹಲವು ಕಡೆ ನೆರೆ ಉಂಟಾಗಿದೆ. ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ನದಿಗಳು ಅಪಾಯದ ಮಟ್ಟ ತಲುಪಿದ್ದು ನದಿ ಪಾತ್ರದ ಜನರಿಗೆ ಆತಂಕ ಎದುರಾಗಿದೆ.
ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ನದಿಗಳು ಅಪಾಯದ ಮಟ್ಟ ತಲುಪಿದ್ದು ನದಿ ಪಾತ್ರದ ಜನರಿಗೆ ಆತಂಕ ಎದುರಾಗಿದೆ.
ಇನ್ನು ಕೆಲವು ಕಡೆ ಭೂಕುಸಿತ, ಗುಡ್ಡ ಕುಸಿತದ ಆತಂಕವಾದರೆ, ಇನ್ನೂ ಕೆಲ ಪ್ರದೇಶಗಳಲ್ಲಿ ಮನೆಗಳ ಒಳಗೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ. ಕೃಷಿ ಭೂಮಿಗಳು ನಾಶವಾಗಿದ್ದು ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳು ಮಳೆಯ ಅಬ್ಬರಕ್ಕೆ ನಲುಗಿ ಹೋಗಿವೆ. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ರಕ್ಷಣಾ ತಂಡಗಳನ್ನ ಸಜ್ಜುಗೊಳಿಸಲಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕೊಡ್ಕಣಿ ಎಂಬಲ್ಲಿ ಅತಿಹೆಚ್ಚು 227 ಮಿಲಿಮೀಟರ್ ಮಳೆಯಾಗಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಅಧಿಕ ಮಳೆ, ಇನ್ನುಳಿದ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆ ಮತ್ತು ಉಳಿದ ಕಡೆಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಹಾಗೂ ಹಾಸನ, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ಬಿಟ್ಟುಬಿಡದೆ ಮಳೆ ಸುರಿಯುತ್ತಿರುವ ಕಾರಣದಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಮೊಬೈಲ್ ನೆಟ್ವರ್ಕ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
Related