ಮಕ್ಕಳು ಪೌಷ್ಟಿಕಾಂಶದ ಆಹಾರ ಸೇವಿಸುವುದರಿಂದ ಆರೋಗ್ಯ ಸ್ಥಿರವಾಗಿರುತ್ತದೆ: ಆರ್. ಕುಬೇರಪ್ಪ

0
185

ಹೊಸನಗರ: ಮಕ್ಕಳು ಪೌಷ್ಟಿಕಾಂಶವಿರುವ ಆಹಾರ ಸೇವಿಸುವುದರಿಂದ ಆರೋಗ್ಯ ಸ್ಥಿರವಾಗಿರುತ್ತದೆ ಎಂದು ಹೊಸನಗರದ ಮಾವಿನಕೊಪ್ಪ ಶಾಲೆಯ ಮುಖ್ಯ ಶಿಕ್ಷಕರಾದ ಆರ್. ಕುಬೇರಪ್ಪನವರು ಹೇಳಿದರು.

ಕೇಂದ್ರ-ರಾಜ್ಯ ಸರ್ಕಾರದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಮಾವಿನಕೊಪ್ಪ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಹಾಲು ಬೇಳೆ-ಕಾಳು ಪಾದರ್ಥಗಳನ್ನು ಸೇವಿಸುವುದರಿಂದ ದೇಹದಲ್ಲಿ ರಕ್ತಕಣಗಳು ಉತ್ಪತ್ತಿಯಾಗುತ್ತದೆ ದೇಹದ ಚಲನೆ ಸ್ಥಿರವಾಗಿರುತ್ತದೆ. ಪ್ರತಿಯೊಬ್ಬರು ದೇಹಕ್ಕೆ ಸ್ಪಂದಿಸುವ ಪೌಷ್ಟಿಕಾಂಶ ಇರುವ ಪದಾರ್ಥಗಳನ್ನು ಸೇವಿಸಬೇಕು ಇದನ್ನು ಅರಿತಿರುವ ಕೇಂದ್ರ, ರಾಜ್ಯ ಸರ್ಕಾರಗಳು ಶಾಲೆಯ ಮಕ್ಕಳಿಗೆ ಕ್ಷೀರ ಭಾಗ್ಯ, ಅಕ್ಷರ ದಾಸೋಹದಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಕೊರತೆ ಕಡಿಮೆಯಾಗಿದ್ದು ಲಾಕ್‌ಡೌನ್ ನಿಂದ ಶಾಲೆಗಳು ಮುಚ್ಚಿರುವುದರಿಂದ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಕೊರತೆ ಕಂಡು ಬರುತ್ತಿದೆ‌. ಈಗ ರಾಜ್ಯದಲ್ಲಿ ಲಾಕ್‌ಡೌನ್ ತೆಗೆಯಲಾಗಿದ್ದು ಮುಂದಿನ ದಿನಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶದ ಪೋಷ್ಟಿಕ ಆಹಾರ ಪದಾರ್ಥಗಳನ್ನು ಶಾಲೆಗಳಲ್ಲಿ ನೀಡುವುದರ ಮೂಲಕ ಮಕ್ಕಳ ಬೆಳವಣಿಗೆ ಹೆಚ್ಚಲಿದೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗಳಿಗೆ ಸೇರಿಸಬೇಕೆಂದು ಈ ಸಂದರ್ಭದಲ್ಲಿ ಪೋಷಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ವಿವಿಧ ರೀತಿಯ ತರಕಾರಿಗಳು, ಬೇಳೆ-ಕಾಳುಗಳು, ಧಾನ್ಯಗಳು, ಔಷಧಿ ಸಸ್ಯಗಳು ಮುಂತಾದ ಪೌಷ್ಟಿಕಾಂಶವಿರುವ ಎಲ್ಲ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕ್ಲಸ್ಟರ್ ಸಿ.ಆರ್.ಪಿ ಮಂಜಪ್ಪನವರು ಪೌಷ್ಟಿಕಾಂಶದ ಅಭಿಯಾನದ ಬಗ್ಗೆ ಜಾಗೃತಿಯ ಬಗ್ಗೆ ಮಾಹಿತಿ ನೀಡಿದರು.

ಎಸ್.ಡಿಎಂಸಿ ಅಧ್ಯಕ್ಷರಾದ ರಾಘವೇಂದ್ರ, ಶಿಕ್ಷಕರುಗಳಾದ ರಾಜು, ಸುರೇಶ್, ವೇದಾವತಿ ಮತ್ತು ಮಂಜಪ್ಪ, ಮಕ್ಕಳ ಪೋಷಕರು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here