ಮಕ್ಕಳ ಆರೋಗ್ಯ ರಕ್ಷಣೆಗೆ ‘ಪೋಷಣ್ ಅಭಿಯಾನ’ ಅತ್ಯುತ್ತಮ ಕಾರ್ಯಕ್ರಮ

0
223

ರಿಪ್ಪನ್‌ಪೇಟೆ: ಮಕ್ಕಳ ಆರೋಗ್ಯ ರಕ್ಷಣೆಗೆ ‘ಪೋಷಣ್ ಅಭಿಯಾನ’ ಅತ್ಯುತ್ತಮ ಕಾರ್ಯಕ್ರಮವಾಗಿದೆ ಎಂದು ಮುಖ್ಯಶಿಕ್ಷಕ ಹನುಮಂತಪ್ಪ ಹೇಳಿದರು.

ಕೋಡೂರು ಗ್ರಾಪಂ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರದವರು ಶುಕ್ರವಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಪೋಷಣ್ ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಕ್ಕಳ ಪೌಷ್ಟಿಕ ಆಹಾರ ಪದ್ಧತಿಗೆ ಸರ್ಕಾರ ಒತ್ತು ನೀಡಿದ್ದು, ಈ ಅಭಿಯಾನ ಆರಂಭಿಸಿದೆ. ಗ್ರಾಮೀಣ ಬಡ ಮಕ್ಕಳು ಹಾಗೂ ಗರ್ಭಿಣಿಯರು, ಬಾಣಂತಿಯರು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಸುಧಾರಣೆ ಕಾಣಲು ಅನುಕೂಲವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ ಅಧ್ಯಕ್ಷ ಸುಧಾಕರ ಹೆಚ್ ಎಂ ಮಾತನಾಡಿ, ನಾವೇ ಹಿತ್ತಲಲ್ಲಿ ಸಾವಯವ ಗೊಬ್ಬರದಲ್ಲಿ ಬೆಳೆದೆ ತರಕಾರಿ, ಸೊಪ್ಪುಗಳನ್ನು ಹೆಚ್ಚಾಗಿ ಬಳಸಿ ವಿಷಯುಕ್ತ ಆಹಾರದಿಂದ ದೂರವಿರೋಣ. ಸದೃಢ ಆರೋಗ್ಯ ಕಂಡುಕೊಳ್ಳೋಣ ಎಂದರು.

ಅಂಗನವಾಡಿ ಕಾರ್ಯಕರ್ತೆ ಶಾಂತಾ ಮಾತನಾಡಿ, ಸಾಂಪ್ರದಾಯಿಕ ಆಹಾರ ಸೇವಿಸಿ ಆರೋಗ್ಯವಂತರಾಗೋಣ. ಅಂಗಡಿ, ಹೋಟೆಲ್‌ಗಳಲ್ಲಿ ಜಂಕ್ ಫುಡ್‌ ಅನ್ನು ಸೇವಿಸುವುದರಿಂದಾಗಿ ಪೌಷ್ಟಿಕಾಂಶದ ಕೊರತೆಯೊಂದಿಗೆ ಮಕ್ಕಳಲ್ಲಿ ಮತ್ತು ಗರ್ಭಿಣಿಯರಲ್ಲಿ ರಕ್ತಹೀನತೆ ಮತ್ತು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಮನೆಮನೆಗಳಲ್ಲಿ ಕೈತೋಟದಲ್ಲಿ ಪೌಷ್ಟಿಕಾಂಶದ ಸಾವಯವ ಬೆಳೆಗಳನ್ನು ಬೆಳೆಯಲು ಉತ್ತೇಜನ ನೀಡಲಾಗಿದೆ. ಪ್ರಾಥಮಿಕ ಹಂತದಿಂದಲೇ ಮಕ್ಕಳ ಆರೋಗ್ಯದ ಜತೆ ಉತ್ತಮ ಶಿಕ್ಷಣ ನೀಡುವ ಕೆಲಸವಾಗುತ್ತಿದೆ. ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ನೀಡುವ ಆಹಾರದಲ್ಲಿ ಪೌಷ್ಟಿಕ, ಶುಚಿತ್ವಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಸಹಶಿಕ್ಷಕ ಯತೀಶ್ ಮಾತನಾಡಿ, ನೈಸರ್ಗಿಕ ಆಹಾರ ಪದ್ಧತಿ ಸೇವಿಸುವುದರ ಮೂಲಕ ಕುಟುಂಬದ ರಕ್ಷಣೆಯಲ್ಲಿ ತಾಯಂದಿರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಜಂಕ್ ಫುಡ್ ನಿಂದ ಆದಷ್ಟು ದೂರವಿರಬೇಕು. ಇಂತಹ ಚಿಕ್ಕ-ಚಿಕ್ಕ ಬದಲಾವಣೆಯಿಂದ ನಮ್ಮ ಕೂಡ ಆಯಸ್ಸು ವೃದ್ದಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಹಶಿಕ್ಷಕ ಯತೀಶ್ ಸ್ವಾಗತಿಸಿದರು. ಮುಖ್ಯಶಿಕ್ಷಕ ಹನುಮಂತಪ್ಪ ವಂದಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here