ಮಗನ ಅಪ್ರಾಪ್ತೆ ಸ್ನೇಹಿತೆಯ ಮೇಲೆ ತಂದೆಯಿಂದಲೇ ಅತ್ಯಾಚಾರ: ಮಲೆನಾಡಿನಲ್ಲೊಂದು ಅವಮಾನೀಯ ಘಟನೆ !!

0
10201

ಎನ್.ಆರ್.ಪುರ: ಮಗನ ಸ್ನೇಹಿತೆಯ ಮೇಲೆ ತಂದೆಯೇ ಅತ್ಯಾಚಾರ ಎಸಗಿದ ಘಟನೆ ತಾಲೂಕಿನ ಬಾಳೆಹೊನ್ನೂರು ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಪೊಲೀಸರು ಆರೋಪಿ ಕಡಬಗೆರೆ ಚಂದ್ರನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂತ್ರಸ್ತೆಯ ತಾಯಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದ್ದು, ತನ್ನ ಮಗಳು ಅಪ್ರಾಪ್ತೆಯಾಗಿದ್ದು ಆಕೆಯು ತನ್ನ ಸ್ನೇಹಿತನ ಮನೆಗೆ ಹೋಗಿದ್ದಳು ಎಂದು ದೂರು ಕೊಟ್ಟಿದ್ದಾರೆ.

ಆಗ ಸ್ನೇಹಿತ ಇರಲಿಲ್ಲ. ಸ್ನೇಹಿತನ ತಂದೆ ಉಳಿದುಕೊಳ್ಳಲು ಹೇಳಿ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಬಾಳೆಹೊನ್ನೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here