ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜೊತೆ ತನ್ನ ಮನೆ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗರ್ತಿಕೆರೆ ಸಮೀಪದ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಿದ್ಯಾ(32) ಹಾಗೂ ಮಗಳು ತನ್ವಿ(4) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಸುಮಾರು ೦೩ ಗಂಟೆಗೆ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದು, ಬೆಳಗ್ಗೆ ಮೃತದೇಹಗಳು ಪತ್ತೆಯಾಗಿವೆ.

ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಧಾವಿಸಿದ್ದು, ತನಿಖೆ ಕೈಗೊಂಡಿದ್ದಾರೆ.
