23.2 C
Shimoga
Sunday, November 27, 2022

ಮಣಿಪಾಲ ಆರೋಗ್ಯ ಕಾರ್ಡ್ 2022ರ ನೋಂದಾವಣೆ ನ.30 ರವರೆಗೆ ವಿಸ್ತರಣೆ ; ಡಾ. ಅವಿನಾಶ್ ಶೆಟ್ಟಿ

ರಿಪ್ಪನ್‌ಪೇಟೆ : ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯ ಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಹೇಳಿದರು.


ಪಟ್ಟಣದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಆರೋಗ್ಯ ಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಆರಂಭಿಸಲಾಯಿತು. ಮಣಿಪಾಲ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ ವಾಕ್ಯ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿಯನ್ನು ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕಾರ್ಡ್‌ನ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಹಿಂಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್‌ನ 22ನೇ ವರ್ಷವು ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯನ್ನು ಒಳಗೊಂಡಿದೆ.

1 ವರ್ಷದ ಯೋಜನೆಯಲ್ಲಿ ಕಾರ್ಡ್‌ನ ಸದಸ್ಯತ್ವವು ಒಬ್ಬರಿಗೆ 300 ರೂ., ಕೌಟುಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ 600 ರೂ. ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) 750 ರೂ. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ 500 ರೂ. ಕುಟುಂಬಕ್ಕೆ 800 ರೂ. ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ 950 ರೂ. ಆಗಿರುತ್ತದೆ.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಈ ಕೆಳಗಿನ ರಿಯಾಯಿತಿ ಸೌಲಭ್ಯ ಪಡೆಯಬಹುದು.

ಹೊರ ರೋಗಿ, ಒಳ ರೋಗಿ ವಿಭಾಗದಲ್ಲಿ :

  • ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇಕಡಾ 50 ರಿಯಾಯಿತಿ.
  • ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇಕಡಾ 30 ರಿಯಾಯಿತಿ.
  • ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ.
  • ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ.
  • ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ.
  • ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ.
  • ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್‌ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ 10 ರಿಯಾಯಿತಿ.


ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್‌ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ನೀಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ವ್ಯವಸ್ಥಾಪಕರಾದ ಕೆ. ಸಚಿನ್ ಕಾರಂತ್, ಸಹಾಯಕ ವ್ಯವಸ್ಥಾಪಕರಾದ ಕೃಷ್ಣಪ್ರಸಾದ ಬಿ ಎಸ್, ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಚೇತನ್, ಹೆಚ್.ಆರ್ ಶ್ರೀಕಂಠ ಹಾಗೂ ಅನಿಲ್ ನಾಯ್ಕ, ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕೆ ಎಂ ಬಸವರಾಜ್, ಸಬಾಸ್ಟಿನ್, ಪರಶುರಾಮ್, ಚಿದಾನಂದ ಸ್ವಾಮಿ, ರಫಿ ಉಪಸ್ಥಿತರಿದ್ದರು.

2022ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:

ರಿಪ್ಪನ್‌ಪೇಟೆ: ಪಿಯೂಸ್ ರೋಡ್ರಿಗಸ್: 9448914656, ರಕ್ಷಿತ್: 8971289756, ಸೈಂಟ್ ಮಿಲಾಗ್ರೆಸ್ ಸೌಹಾರ್ಧ: 8762449853 ಹೊಸನಗರದ ಶ್ರೀಕಂಠ ಹೆಚ್.ಆರ್.9483016851, ಶಾಂತಮೂರ್ತಿ 9448787820, ನಾರಾಯಣಕಾಮತ್ 9449685877, ನಿಟ್ಟೂರು ಕೃಷ್ಣಮೂರ್ತಿ 9448600064 ಬಾಲಕೃಷ್ಣ ಮಾಸ್ತಿಕಟ್ಟೆ 9448914636 ಸಂಪರ್ಕಿಸುವಂತೆ ತಿಳಿಸಿದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!