ಮತ್ತೆ ಲಾಕ್ ಡೌನ್ ಆಗದಿರಲು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಲು ರಕ್ಷಣಾ ಇಲಾಖೆ ಕರೆ

0
603

ಹೊಸನಗರ : ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಎಲ್ಲೆ ಮೀರುತ್ತಿದ್ದು ಒಂದೊಂದೇ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಆಗುತ್ತಿದ್ದು ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಾರದಿರುವಂತೆ ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಿ ಸಾಮಾಜಿಕ ಅಂತರ ಕಾಪಾಡುವ ಮೂಲಕ ಮುಂದಾಗಬಹುದಾದ ಅನಾಹುತಗಳನ್ನು ತಪ್ಪಿಸಬೇಕೆಂದು ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಜಿ.ಕೆ ಮಧುಸೂದನ್, ಸಬ್ ಇನ್ಸ್ಪೆಕ್ಟರ್ ಎಂ.ಎನ್ ರಾಜೇಂದ್ರ ನಾಯಕ್ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಸೋಂಕಿನ ಸಂಖ್ಯೆಯಲ್ಲಿ ಪ್ರತಿದಿನ ಏರಿಕೆಯಾಗುತ್ತಿದ್ದು ಇದೊಂದು ಆಘಾತಕಾರಿ ಸಂಗತಿಯಾಗಿದೆ. ಸರ್ಕಾರ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಸಾರ್ವಜನಿಕರು ಈ ನಿಟ್ಟಿನಲ್ಲಿ ಸರ್ಕಾರ ಜೊತೆ ಕೈ ಜೋಡಿಸಬೇಕೆಂದು, ಕೊರೊನಾ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿರುವ ಕೆಲವು ಕ್ರಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕೆಂದು ಇಲ್ಲದಿದ್ದರೆ ಕಳೆದ ವರ್ಷದ ಮಾರ್ಚ್, ಏಪ್ರಿಲ್, ಮೇ ತಿಂಗಳು ಕರಾಳ ದಿನಗಳನ್ನು ಮತ್ತೊಮ್ಮೆ ಎದುರು ನೋಡಬೇಕಾದೀತು ಎಂದು ಅವರು ಎಚ್ಚರಿಸಿದರು. ಮಾಸ್ಕ್ ಧರಿಸದಿದ್ದರೆ ದಂಡದೊಂದಿಗೆ ಪ್ರಕರಣ ದಾಖಲಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ವರದಿ: ಉಡುಪಿ ಎಸ್ ಸದಾನಂದ ಹೊಸನಗರ 8277173177
ಜಾಹಿರಾತು

LEAVE A REPLY

Please enter your comment!
Please enter your name here