ಮನನೊಂದು ನೇಣಿಗೆ ಶರಣಾದ ‘ಅಪ್ಪು’ ಅಭಿಮಾನಿ !

0
2049

ಚಿಕ್ಕಮಗಳೂರು: ನಟ ಪುನೀತ್ ರಾಜ್‍ಕುಮಾರ್ ಸಾವಿನಿಂದ ಮನನೊಂದು ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಾಂಪುರದಲ್ಲಿ ನಡೆದಿದೆ.

ರಾಂಪುರದ ವಾಸಿಯಾಗಿದ್ದ ಶರತ್ (30) ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಪುನೀತ್ ಸಾವಿನ ಸುದ್ದಿ ಕೇಳಿ ಅಳುತ್ತಿದ್ದ ಶರತ್‍ಗೆ ಮನೆಯವರಿಂದ ಸಮಾಧಾನ ಪ್ರಯತ್ನಗಳು ನಡೆದಿತ್ತು. ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ವ್ಯಕ್ತಿ ಹೋಟೆಲ್‍ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತರಿಗೆ ಒಂದು ಮಗುವಿದ್ದು, ಪತ್ನಿ ಎಂಟು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ.

ಈ ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಕರು ತಮಿಳುನಾಡಿನಲ್ಲಿ ಇದ್ದು ನಾಳೆ ಇವರುಬಂದ ನಂತರ ಅಂತ್ಯಸಂಸ್ಕಾರ ನಡೆಸುವುದಾಗಿ ತಿಳಿದು ಬಂದಿದೆ.

ಜಾಹಿರಾತು

LEAVE A REPLY

Please enter your comment!
Please enter your name here