ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ ಒಂದೇ ಕುಟುಂಬದ ಮೂವರು..!

0
4129

ಶೃಂಗೇರಿ: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ನಡೆದಿದೆ.

ಮಕ್ಕಿಮನೆ ಗ್ರಾಮದ ನಿವಾಸಿಗಳಾದ ಅಜ್ಜಿ, ಮಗಳು, ಮೊಮ್ಮಗಳು ಮೂವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಜ್ಜಿ ವೀಣಾ (70), ತಾಯಿ ಶಾರದಾ (49) ಮತ್ತು ಮೊಮ್ಮಗಳು ಶ್ರಾವ್ಯ (16) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಮೃತ ವೀಣಾ ಶೃಂಗೇರಿಯ ಹೊನ್ನವಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದರು. ಮಗಳು ಶ್ರಾವ್ಯ ಈ ಬಾರಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಅಂಗನವಾಡಿಗೆ ತೆರಳದ ಹಿನ್ನೆಲೆ ಅಂಗನವಾಡಿ ಸಹಾಯಕಿ ಪೂರ್ಣಿಮ ವೀಣಾಗೆ ಕರೆ ಮಾಡಿದ್ದಾರೆ. ಅವರು ಫೋನ್ ಪಿಕ್ ಮಾಡಿಲ್ಲ. ಆಗ ಪೂರ್ಣಿಮ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಅವರ ಮನೆ ಬಳಿ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ಬಡಿದರೂ ಯಾರೂ ತೆಗೆಯದ ಹಿನ್ನೆಲೆ ಸ್ಥಳೀಯರು ಮನೆಯ ಹೆಂಚು ತೆಗೆದು ನೋಡಿದಾಗ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here