‘ಮರ್ಯಾದೆಯಿಂದ ವಾಪಸ್ ಹೋಗೋ ಲೇ’ ; ಇನ್ಸ್‌ಪೆಕ್ಟರ್‌ಗೆ ಎಂ.ಪಿ.ಕುಮಾರಸ್ವಾಮಿ ಆವಾಜ್

0
513

ಚಿಕ್ಕಮಗಳೂರು: ಆಗಾಗ್ಗೆ ತನ್ನ ದರ್ಪ ತೋರಿಸುತ್ತಾ ವಿವಾದಕ್ಕೆ ಗುರಿಯಾಗುತ್ತಿರುವ ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ, ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರಿಗೆ ಫೋನ್ ನಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಠಾಣೆಗೆ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ರವೀಶ್‌ಗೆ ಆವಾಜ್ ಹಾಕಿದ್ದು, ಏಕವಚನದಲ್ಲೇ ಅಸಾಂವಿಧಾನಿಕ ಪದಗಳನ್ನು ಬಳಸಿ ಮಾತನಾಡಿದ್ದಾರೆ.

‘ಯಾರನ್ನ ಕೇಳಿ ಚಾರ್ಜ್ ತೆಗೆದುಕೊಂಡೆ, ಎಲ್ಲಿದ್ದೀಯಾ? ನಿನಗೆ ಬರ್ಬೇಡಾ ಅಂತ ಹೇಳಿದ್ದೆ ತಾನೆ? ನೀನು ವಾಪಸ್ ಹೋಗು, ಠಾಣೆಯಲ್ಲಿ ಇರಬೇಡ, ಮರ್ಯಾದೆಯಿಂದ ವಾಪಸ್ ಹೋಗೋ ಲೇ, ನಾನು ಹೇಳಿದ ಹಾಗೆ ಕೇಳು, ಬೇಕಾದ್ರೆ ರೆಕಾರ್ಡ್ ಮಾಡ್ಕೊ, ನಾಳೆನೇ ನಿನ್ನ ಎತ್ತಂಗಡಿ ಮಾಡಿಸ್ತೇನೆ’ ಎಂದು ಗದರಿದ್ದಾರೆ.

ಮುಂದುವರಿದು ‘ಐಜಿಗೆ ಎಷ್ಟು ಲಂಚ ಕೊಟ್ಟಿದ್ದೀಯಾ? ಯಾವನು ಐಜಿ? ಮೂಡಿಗೆರೆಗೆ ನಾನೇ ಎಲ್ಲ, ನನ್ನನ್ನು ನೋಡಲು ಬಂದ್ರೆ ಒದ್ದು ಓಡಿಸುತ್ತೇನೆ’ ಎಂದು ಇನ್ಸ್‌ಪೆಕ್ಟರ್ ರನ್ನ ಫೋನ್ ಮೂಲಕ ಧಮ್ಕಿ ಹಾಕಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here