ಮಲೆಮನೆ ಗ್ರಾಮಕ್ಕೆ ತಿಂಗಳೊಳಗೆ ಜಮೀನು ಮಂಜೂರು: ಸಚಿವ ಆರ್. ಅಶೋಕ್

0
228

ಚಿಕ್ಕಮಗಳೂರು: ಅತಿವೃಷ್ಟಿಯಲ್ಲಿ ಮೆನೆಗಳನ್ನು ಕಳೆದುಕೊಂಡಿರುವ ಮೂಡಿಗೆರೆ ತಾಲ್ಲೂಕಿನ ಐದು ಕುಟುಂಬಗಳಿಗೆ ಒಂದು ತಿಂಗಳ ಒಳಗೆ ಜಮೀನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದರು.

ನಗರದಲ್ಲಿ ಗುರುವಾರ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಭಾಗಿಯಾಗಿ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಜಿಲ್ಲಾಡಳಿತದ ಜೊತೆಗೆ ಚರ್ಚೆ ನಡೆಸಿದ್ದೇನೆ. ಒಂದು ತಿಂಗಳ ಒಳಗೆ ಅವರಿಗೆ ಜಮೀನು ನೀಡಲಾಗುವುದು ಎಂದರು.

ಇದೇ ವೇಳೆ ಭೂಮಿ ಒತ್ತುವರಿ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ಹಿಂದಿನಿಂದಲೂ ಸರ್ಕಾರಿ ಭೂಮಿಯನ್ನು ಉಳುಮೆ ಮಾಡಿಕೊಂಡು ಕಾಫಿ ಬೆಳೆಯುವ ಮೂಲಕ ದೇಶಕ್ಕೆ ಆದಾಯ ತರುತ್ತಿದ್ದಾರೆ. ಈ ಜಮೀನನ್ನು ಸರ್ಕಾರ ವಾಪಾಸ್ ಪಡೆಯಲು ಆಗಿಲ್ಲ. ಈ ನಿಟ್ಟಿನಲ್ಲಿ ಕಾಫಿ ಬೆಳೆಗಾರರ ಜೊತೆ ಚರ್ಚೆ ನಡೆಸಲಾಗಿದ್ದು ಈ ಜಮೀನನ್ನು ಅವರಿಗೆ ಗುತ್ತಿಗೆ ಆಧಾರದಲ್ಲಿ ನೀಡುವ ಐತಿಹಾಸಿಕ ನಿರ್ಧಾರ ತಗೆದುಕೊಳ್ಳುವ ನಿಟ್ಟಿನಲ್ಲಿ ಚಿಂತಿಸಲಾಗಿದೆ ಎಂದರು.

ಕೊರೊನಾ ನಾಲ್ಕನೇ ಅಲೆ ಈಗಾಗಲೇ ದೇಶದ ಹಲವು ಕಡೆಗಳಲ್ಲಿ ಪ್ರಾರಂಭವಾಗಿದೆ. ಒಂದು ತಿಂಗಳಲ್ಲಿ ರಾಜ್ಯದಲ್ಲಿ ಸೋಂಕು ಪತ್ತೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು ಹಾಗೂ ಪ್ರಧಾನ ಮಂತ್ರಿಗಳು ನೀಡಿರುವ ನಿರ್ದೇಶನಗಳನ್ನು ರಾಜ್ಯದಲ್ಲಿಯೂ ಸಹ ಅನ್ವಯ ಮಾಡಲಾಗುವ ನಿಟ್ಟಿನಲ್ಲಿ ಕ್ರಮ ತಗೆದುಕೊಳ್ಳಲಾಗುವುದು ಎಂದರು.

ಶೃಂಗೇರಿ ತಹಶೀಲ್ದಾರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಸೂಕ್ತ ಕ್ರಮ ತಗೆದುಕೊಳ್ಳುವಂತೆ ಸೂಚನೆ ನೀಡಲಾಗುವುದು ಹಾಗೂ ಈ ಪ್ರಕರಣವನ್ನು ಎಸ್‍ಐಟಿಗೆ ನೀಡುವ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದರು.

ಜಾಹಿರಾತು

LEAVE A REPLY

Please enter your comment!
Please enter your name here