ಅಮ್ಮನಘಟ್ಟವನ್ನು ಪ್ರೇಕ್ಷಣೀಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು ; ಹರತಾಳು ಹಾಲಪ್ಪ

0 707

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಮತ್ತು ಸೊರಬ ಚಂದ್ರಗುತ್ತಿಯ ದೇವಸ್ಥಾನದ ಮಾದರಿಯಲ್ಲಿಯೇ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ದೇವಸ್ಥಾನವನ್ನು ರಾಜ್ಯದಲ್ಲಿ ಅತ್ಯುತ್ತಮ ಮಾದರಿ ಪ್ರೇಕ್ಷಣಿಯ ಯಾತ್ರಾ ಸ್ಥಳವನ್ನಾಗಿಸುವ ಮಹಾದಾಸೆ ಹೊಂದಿದ್ದು ಈ ಹಿಂದಿನ ಅವಧಿಯಲ್ಲಿ ಈ ದೇವಸ್ಥಾನವನ್ನು ಶಿಲಾಮಯ ದೇವಸ್ಥಾನವನ್ನಾಗಿಸಲು ಸರ್ಕಾರದಿಂದ 1.50 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು ನನ್ನ ಅವಧಿಯಲ್ಲಿಯೇ ಪೂರ್ಣವಾಗಬೇಕಾಗಿತ್ತು. ಆದರೆ ರಾಜಕೀಯ ವ್ಯತ್ಯಾಸದಿಂದಾಗಿ ಈಗಿನ ಹಾಲಿ ಶಾಸಕರು ಅನುದಾನವನ್ನು ಬಿಡುಗಡೆಗೊಳಿಸುವ ಮೂಲಕ ಅಭಿವೃದ್ದಿ ಪಡಿಸುವಂತಾಗಲಿ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಹೇಳಿದರು.

ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದ ಅವರು ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿಯಲ್ಲಿ ಗೆಲುವು ಸಾಧಿಸುವುದರೊಂದಿಗೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಈ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಐದು ವರ್ಷದ ಅವಧಿಯಲ್ಲಿ 10 ಕೋಟಿ ರೂ. ಅನುದಾನವನ್ನು ತರುವುದರೊಂದಿಗೆ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸುಮಾರು 23 ಎಕರೆ ಜಾಗವಿದ್ದು ಇಲ್ಲಿ ಪ್ರಕೃತಿಯ ಮಧ್ಯದಲ್ಲಿ ವಿರಾಜಮಾನವಾಗಿ ಬೇಡಿ ಬರುವ ಭಕ್ತರ ಆರಾಧ್ಯ ದೈವವಾಗಿ ಇಷ್ಟಾರ್ಥಗಳನ್ನು ಕರುಣಿಸುವ ಮಹಾತಾಯಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಯೊಂದಿಗೆ ರಾಜ್ಯದಲ್ಲಿ ಅತ್ಯುತ್ತಮ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತು ಎಂದರು.


ಧರ್ಮದ ಕಾರ್ಯಕ್ರಮದಲ್ಲಿ ರಾಜಕೀಯದ ಪ್ರಶ್ನೆಗಳನ್ನು ಎತ್ತಬೇಡಿ ಎಂದು ಮಾಧ್ಯಮದವರಿಗೆ ಹೇಳಿ, ರಾಜಕೀಯದ ಒಂದು ವಿಷಯವನ್ನು ಈ ಸಂದರ್ಭದಲ್ಲಿ ಎತ್ತದೆ ದೇವಸ್ಥಾನದ ಅಭಿವೃದ್ಧಿ ಕಡೆಯೇ ಹೆಚ್ಚು ಒತ್ತು ನೀಡಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಹರತಾಳು ಹಾಲಪ್ಪ ಇವರನ್ನು ದೇವಸ್ಥಾನದ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್, ಎಪಿಎಂಸಿ ಮಾಜಿ ನಿರ್ದೇಶಕರು ಕಲ್ಯಾಣಪ್ಪಗೌಡ, ಪ್ರಧಾನ ಕಾರ್ಯದರ್ಶಿ ಸುಧೀರ್‌ಭಟ್, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಕೋಡೂರು ವಿಜೇಂದ್ರಭಟ್, ಹರೀಶ್‌ಗೌಡ, ಶ್ರೀನಿವಾಸ್ ಹಿಂಡ್ಲೆಮನೆ, ಡಾಕಪ್ಪ ಬೆಳ್ಳೂರು, ರತ್ನಮ್ಮ, ತಿಮ್ಮಪ್ಪ, ಕೋಡೂರು ಗ್ರಾಮ ಪಂಚಾಯ್ತಿ ಸದಸ್ಯರಾದ ಶೇಖರಪ್ಪ ಎಲ್., ಜಯಪ್ರಕಾಶ್ ಇನ್ನಿತರರು, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!