ಮಳೆ ಹೆಚ್ಚಾಗುವ ಹಿನ್ನೆಲೆ; ಮೂರು ದಿನ ರೆಡ್ ಅಲರ್ಟ್ !

0
679

ಶಿವಮೊಗ್ಗ/ಚಿಕ್ಕಮಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಇಂದಿನಿಂದ 3 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಈಗಾಗಲೇ ಜಿಲ್ಲಾಡಳಿತ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ಭೇಟಿ ನೀಡದಂತೆ ಸೂಚಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಮಳೆ ಹೆಚ್ಚಾಗಿದ್ದು, ಸಂಜೆಯ ಬಳಿಕ ದಿನವೂ ಮಳೆ ಸುರಿಯುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಇಂದಿನಿಂದ ಜೂನ್ 25ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆ ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ದಾಂಡೇಲಿ, ಕುಮಟಾ, ಹೊನ್ನಾವರ, ಶಿರಸಿ, ಸಿದ್ಧಾಪುರ, ಭಟ್ಕಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ.

ಶಿವಮೊಗ್ಗದ ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲೂ ಮಳೆ ಹೆಚ್ಚಾಗಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಮುಂತಾದೆಡೆಯೂ ಮಳೆ ಜಾಸ್ತಿಯಾಗುತ್ತಿದೆ.

ಜಾಹಿರಾತು

LEAVE A REPLY

Please enter your comment!
Please enter your name here