ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಹಂತಕರನ್ನು ಗಲ್ಲಿಗೇರಿಸಲು ಆಗ್ರಹ

0
1520

ಮೂಡಿಗೆರೆ: ದೆಹಲಿಯ ಮಹಿಳಾ ಪೊಲೀಸ್ ಅಧಿಕಾರಿಯೋರ್ವರನ್ನು ಅಪಹರಿಸಿ, ಬಿಹಾರದಲ್ಲಿ ಆಕೆಯ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿದ ಪ್ರಕರಣದ ಹಂತಕರನ್ನು ಕೂಡಲೇ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಮೂಡಿಗೆರೆ ತಾಲೂಕು ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಮಾತನಾಡಿ, ದೆಹಲಿಯ ಮುಸ್ಲಿಂ ಮಹಿಳಾ ಪೊಲೀಸ್ ಅಧಿಕಾರಿಯನ್ನು ಬಿಹಾರದಲ್ಲಿ ಭೀಕರವಾಗಿ, ಆಕೆಯ ಸ್ತನ ಮತ್ತು ಗುಪ್ತಾಂಗವನ್ನು ಮಾರಕಾಸ್ತ್ರಗಳಿಂದ ಕತ್ತರಿಸಿ, ಹತ್ಯೆ ನಡೆಸಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಅಧಿಕಾರ ಹಿಡಿದ ನಂತರ ಇಂತಹ ಹೇಯ ಕೃತ್ಯಗಳು ಮಿತಿಮೀರಿದೆ. ರಾಷ್ಟ್ರದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅತ್ಯಾಚಾರಿ ಹಂತಕರನ್ನು ಕೂಡಲೇ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ಬಿಎಸ್ಪಿ ಮುಖಂಡ ಲೋಕವಳ್ಳಿ ರಮೇಶ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ಶಬ್ಬೀರ್ ಅಹ್ಮದ್ ಬೇಗ್, ಎಸ್ಡಿಪಿಐ ಕ್ಷೇತ್ರ ಸಮಿತಿ ಅಧ್ಯಕ್ಷ ಮಹಮ್ಮದ್ ರಫೀಕ್, ಕಾರ್ಯದರ್ಶಿ ಎಂ ಯು ಷರೀಫ್, ಮಲೆನಾಡು ಮುಸ್ಲಿಂ ವೇದಿಕೆ ಅಧ್ಯಕ್ಷ ಅಬ್ರಾರ್ ಭಾಗವಹಿಸಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here