ಮಹಿಳೆಯರನ್ನು ಗೌರವುದು ಸಮಾಜದಲ್ಲಿ ಮುಖ್ಯ ಆಗಬೇಕು ಕಾಣಬೇಕು: ಸಿವಿಲ್ ನ್ಯಾಯಾಧೀಶ ನಂದೀಶ್

0
49

ಚಿಕ್ಕಮಗಳೂರು: ಸಮಾಜದಲ್ಲಿನ ಪ್ರತಿಯೊಬ್ಬ ಸಾರ್ವಜನಿಕನು ಸಾಮಾಜಿಕ ಪರಿಕಲ್ಪನೆಯನ್ನು ಅರ್ಥಯಿಸಿಕೊಂಡು ಸಮಾಜದಲ್ಲಿ ಮಹಿಳೆಯರನ್ನು ಗೌರಕಾಣಬೇಕು ಎಂದು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ನಂದೀಶ್ ಆರ್.ಪಿ ಹೇಳಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು,‌ ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸಬಲರಾಗಬೇಕು, ಶಿಕ್ಷಣದ ಮೂಲಕ ಹೆಣ್ಣು ಪ್ರತಿ ರಂಗದಲ್ಲೂ ಸಾಧನೆ ಮಾಡುವ ಮೂಲಕ ಇನ್ನಷ್ಟು ಬಲಿಷ್ಠರಾಗಬೇಕು ಸಮಾಜದಲ್ಲಿ ಶಿಕ್ಷಕರು ಮತ್ತು ಪೋಷಕರಿಂದ ಉತ್ತಮ ಸಂಸ್ಕಾರವನ್ನು ಪಡೆದುಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಸಕಾರತ್ಮಕ ಅಂಶಗಳನ್ನೇ ನಾವು ಯಶಸ್ಸಿನ ಮೆಟ್ಟಿಲುಗಳನ್ನಾಗಿಸಿಕೊಂಡು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರಬೇಕೆಂದು ತಿಳಿಸಿದ ಅವರು ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಲೈಗಿಂಕ ಕಿರುಕುಳ, ದೌರ್ಜನ್ಯ ತಡೆಗಟ್ಟಬೇಕು ಎಂದು ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗನವಾಡಿ ಕೇಂದ್ರದಿಂದಲ್ಲೆ ಮಕ್ಕಳ ಕಲಿಕೆ ಶುರುವಾಗುವುದರಿಂದ ಅಂಗನವಾಡಿಯಿಂದಲ್ಲೇ ಮಕ್ಕಳಿಗೆ ಮಹಿಳೆಯ ಮೇಲೆ, ಹಿರಿಯರ ಮೇಲೆ ಗೌರವ ಮೂಡಿಸುವಂತಹ ಮನೋಭಾವನೆಯನ್ನು ಸೃಷ್ಠಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು.

ಭಾರತದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ, ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕೇ ಹೊರತು ಕಿಳರಿಮೆಯಿಂದಲ್ಲ, ಹೆಣ್ಣನ್ನು ಗೌರವಿಸುವ ಸಮಾಜ ನಿರ್ಮಾಣವಾಗಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಥಾಮಸ್ ಮಾತನಾಡಿ, ಹೆಣ್ಣು ಮಕ್ಕಳು ಮೊದಲು ತಮ್ಮ ಸಾಮರ್ಥ್ಯದ ಬಗ್ಗೆ ಆತ್ಮ ವಿಶ್ವಾಸ ಹೊಂದಿರಬೇಕು ನಮ್ಮಿಂದ ಎಲ್ಲಾ ಕೆಲಸಗಳನ್ನು ಸಾಧಿಸಲು ಸಾಧ್ಯವೆಂಬ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು, ಸಮಾನತೆ ಮತ್ತು ಒಗ್ಗಟಿನಿಂದ ಸಮಾಜದಲ್ಲಿ ಬದುಕಬೇಕು ಎಂದು ಹೇಳಿದರು.

ಬಾಲ್ಯ ವಿವಾಹ ನಿವಾರಣೆಗೆ ಎಲ್ಲರು ಮುಂದಾಗಬೇಕು ಗ್ರಾಮಗಳಲ್ಲಿರುವ ಅಂಗನವಾಡಿ ಕಾರ್ಯಕರ್ತೆರಿಗೆ ಹೆಚ್ಚು ಜನರ ಬಳಕೆಯಿರುವುದರಿಂದ ಕಾರ್ಯಕರ್ತೆಯರ ಮೂಲಕ ಕಾನೂನಿನ ಅರಿವು ಮೂಡಿಸುವಂತಹ ಕೆಲಸ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಡಿ.ಬಿ ಸುಜೇಂದ್ರ ಅವರು ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಮತ್ತು ರಕ್ಷಣೆಯ ಬಗ್ಗೆ ಉಪನ್ಯಾಸ ನೀಡಿದರು.

ವಕೀಲೆ ಡಿ.ಎಸ್ ಮಮತ ಮಹಿಳಾ ಸಬಲೀಕರಣ, ಬಾಲ್ಯವಿವಾಹ ತಡೆ ಕಾಯ್ದೆ ಮತ್ತು ಲೈಂಗಿಕ ದೌರ್ಜಲ್ಯ ತಡೆ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ

ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ. ಜಿ, ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here