ಮಾರುತಿಪುರ ಗ್ರಾಪಂ ಮಾಜಿ ಅಧ್ಯಕ್ಷ ಓಂಕೇಶ್ ಗೌಡ ನಿಧನ: ಸಂತಾಪ

0
1322

ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಸಂಪಳ್ಳಿ ಓಂಕೇಶ್ ಗೌಡ (55) ಇಂದು ಬೆಳಿಗ್ಗೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು, 20 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರಾಗಿ, ಸತತ 2 ಬಾರಿ ಮಾರುತಿಪುರ ಗ್ರಾಮ ಪಂಚಾಯತಿಗೆ ಸಂಪಳ್ಳಿ ಕ್ಷೇತ್ರದಿಂದ ಸದಸ್ಯರಾಗಿ ಆಯ್ಕೆಯಾಗಿ ಒಂದು ಬಾರಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧು-ಬಳಗವನ್ನು ಹಾಗೂ ಸ್ನೇಹಿತ ವಲಯವನ್ನು ಅಗಲಿದ್ದಾರೆ.

ಸಂತಾಪ:

ಓಂಕೇಶ್ ಗೌಡರ ನಿಧನಕ್ಕೆ ‘ಮಲ್ನಾಡ್ ಟೈಮ್ಸ್’ ಸುದ್ದಿ ಬಳಗ, ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್, ತಾಪಂ ಮಾಜಿ ಸದಸ್ಯ ಚಂದ್ರಮೌಳಿಗೌಡ, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು, ಮಾರುತಿಪುರ ಗ್ರಾಪಂ ಅಧ್ಯಕ್ಷರು, ಸರ್ವ ಸದಸ್ಯರು ಮತ್ತು ಸಿಬ್ಬಂದಿಗಳು ತೀವ್ರ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here