ಮಾರ್ಚ್ 28 ರಂದು ಕಗ್ಗಲಿಯಲ್ಲಿ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ & ಧರ್ಮಸಭೆ

0
354

ರಿಪ್ಪನ್‌ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಗ್ಗಲಿ ಪುಟ್ಟಸ್ವಾಮಿಗೌಡರ ಮನೆಯಲ್ಲಿ ರಂಭಾಪುರಿ ಪೀಠದ ಜಗದ್ಗುರು ಡಾ.ಪ್ರಸನ್ನರೇಣುಕ ವೀರಸೋಮೇಶ್ವರ ಭಗವತ್ಪಾದರುಗಳ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮ ಸಮಾರಂಭ ಕಾರ್ಯಕ್ರಮವನ್ನು ಮಾರ್ಚ್ 28 ರಂದು ಸೋಮವಾರ ಬೆಳಗ್ಗೆ ಆಯೋಜಿಸಲಾಗಿದೆ ಎಂದು ಕಗ್ಗಲಿ ಪುಟ್ಟಸ್ವಾಮಿಗೌಡರು ಮತ್ತು ಕಗ್ಗಲಿ ಶಿವಪ್ರಕಾಶ ಪಾಟೀಲ್ ತಿಳಿಸಿದರು.

ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮ ಸಮಾರಂಭದಲ್ಲಿ ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾಯ ಸ್ವಾಮಿಜಿಯವರು ಭಾಗವಹಿಸುವರು. ಈ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿ ಜಗದ್ಗುರುಗಳ ದರ್ಶನಾಶೀರ್ವಾದ ಪಡೆಯುವಂತೆ ಮನವಿ ಮಾಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here