ಮಾವಿನಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ: ಸನ್ಮಾನ

0
706

ಹೊಸನಗರ: ತಾಲ್ಲೂಕಿನ ಮಾವಿನಕೊಪ್ಪ ಶಾಲೆಯ ಸಹ ಶಿಕ್ಷಕರಾದ ಮಂಜಪ್ಪನವರು ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.

ಇವರನ್ನು ಹೊಸನಗರದ ಮಾವಿನಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರು ಮಂಜಪ್ಪನವರನ್ನು ಅದ್ಧೂರಿಯಾಗಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿದರು.

ಈ ಸಂದರ್ಭದಲ್ಲಿ ಈ ಶಾಲೆಯ ಮುಖ್ಯ ಶಿಕ್ಷಕರಾದ ಕುಬೇರಪ್ಪ ಆರ್, ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ್ ಆರ್, ಎಸ್‌ಡಿಎಂಸಿ ಅಧ್ಯಕ್ಷರಾದ ರಾಘವೇಂದ್ರ, ಉಪಾಧ್ಯಕ್ಷರಾದ ಸವಿತಾ, ಸಹ ಶಿಕ್ಷಕರಾದ ಬಿ.ಹೆಚ್.ರಾಜು, ಸುರೇಶ್ ಆರ್, ವೇದಾಬಾಯಿ ಎನ್, ಕೆಂಚಪ್ಪ ಜಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here