ಮಾಸ್ಕ್ ಧರಿಸದೆ ಅಡ್ಡಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿ ಜಾಗೃತಿ ಮೂಡಿಸಿದ ಪೊಲೀಸರು

0
451

ಶಿವಮೊಗ್ಗ : ನಗರದ ಸರ್ಕಾರಿ ಖಾಸಗಿ ಬಸ್ ನಿಲ್ದಾಣ ಹಾಗೂ ಪ್ರಮುಖ ವೃತ್ತ, ರಸ್ತೆಗಳಲ್ಲಿ ಇಂದು ಪೊಲೀಸರು ಮಾಸ್ಕ್ ಧರಿಸದೆ ಅಡ್ಡಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿ ಜಾಗೃತಿ ಮೂಡಿಸಿದರು.

ಎಎಸ್‌ಪಿ ಡಾ.ಶೇಖರ್, ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ, ಎಲ್ಲಾ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ವಿವಿಧ ಕಡೆಗಳಲ್ಲಿ ಜಾಗೃತಿ ಮೂಡಿಸಿದರು.

ಸರ್ಕಾರಿ ಹಾಗೂ ಖಾಸಗಿ ಬಸ್‌ಗಳಲ್ಲಿ ಮಾಸ್ಕ್ ಧರಿಸದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಿದರು. ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ತಿಳುವಳಿಕೆ ನೀಡಿದರು.

ಅಲ್ಲದೆ ನಗರದ ಅನೇಕ ಕಡೆ ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದ ಬೈಕ್ ಸವಾರರಿಗೆ ದಂಡ ಹಾಕಿ ಎಚ್ಚರಿಕೆ ನೀಡಿದರು

ಜಾಹಿರಾತು

LEAVE A REPLY

Please enter your comment!
Please enter your name here