23.2 C
Shimoga
Sunday, November 27, 2022

ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಇನ್ನೂ ತೀರ್ಮಾನ ಮಾಡಿಲ್ಲ ; ಸಿದ್ಧರಾಮಯ್ಯ

ಚಿಕ್ಕಮಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಹಳ ಕಡೆ ಆಹ್ವಾನ ಇದೆ. ಆದರೆ ಇನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡುತ್ತಿದ್ದಾರೆ. ಕೋಲಾರ, ಚಿಕ್ಕಮಗಳೂರು, ವರುಣಾದಿಂದಲೂ ಸ್ಪರ್ಧಿಸಲು ಒತ್ತಾಯ ಮಾಡುತ್ತಿದ್ದಾರೆ. ಅಂತಿಮವಾಗಿ ಜನರು, ಪಕ್ಷ ಏನು ಹೇಳುತ್ತಾರೋ ನೋಡೋಣ ಎಂದಿದ್ದಾರೆ.

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಕಡೆಯ ದಿನವಾಗಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆಎಐಸಿಸಿ ಅಧ್ಯಕ್ಷರಾಗಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ. ರಾಹುಲ್ ಗಾಂಧಿ ಅವರು 21 ದಿನ 510 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ. ಇದು ಐತಿಹಾಸಿಕವಾಗಿದ್ದು, ನಿರೀಕ್ಷೆಗೆ ಮೀರಿ ಜನ ಸ್ಪಂದಿಸಿದರು. ಅದೂ ಸಹ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಬಲ ತಂದಿದೆ. ಮುಂಬರುವ ಚುನಾವಣೆಯಲ್ಲಿ ಗರಿಷ್ಠ 130 ರಿಂದ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೊರಗಿನಿಂದ ಬಂದವರೂ ಚುನಾವಣೆ ಸ್ಪರ್ಧೆಗೆ ಅರ್ಜಿ ಹಾಕಬಹುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೇರೆಯವರು ಅರ್ಜಿ ಹಾಕಬಹುದಾ ಎಂದು ಕೇಳಿದ್ದಕ್ಕೆ ಹಾಕಬಹುದು ಎಂದಿದ್ದಾರೆ. ಯಾರಿಗೆ ಕಾಂಗ್ರೆಸ್ ಸಿದ್ಧಾಂತ, ನಾಯಕತ್ವದಲ್ಲಿ ನಂಬಿಕೆ ಇದೆ ಅವರು ಅರ್ಜಿ ಹಾಕಬಹುದು. ಅದನ್ನು ಸ್ವೀಕರಿಸಬಹುದೇ, ಬೇಡವೇ ಎನ್ನುವುದನ್ನು ಪರಿಶೀಲಿಸಲು ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಇದೆ. ಅದು ತೀರ್ಮಾನ ಮಾಡುತ್ತದೆ ಎಂದರು.

ಸಚಿವ ಶ್ರೀರಾಮುಲು ವಿರುದ್ದ ಸಿದ್ದರಾಮಯ್ಯ ಕಿಡಿ:

ಕಾಲುವೆ ದುರಸ್ಥಿಗೆ ಆಗ್ರಹಿಸಿ ಸಚಿವ ಶ್ರೀರಾಮುಲು ಸ್ಥಳದಲ್ಲಿ ಮೊಕ್ಕಂ ಹೂಡಿರುವ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಈ ಬಾರಿ ಮೊಣಕಾಲ್ಮೂರಿನಲ್ಲಿ ನಿಂತು ಗೆಲ್ಲಲಿ. ಬಿಎಸ್‌ಆರ್ ಪಕ್ಷ ಮಾಡಿದ್ದವರಿಗೆ ಯಾವ ಸಿದ್ಧಾಂತ ಇಲ್ಲ. ರೈತರಿಗೆ ಸರಿಯಾದ ಪರಿಹಾರ ಕೊಟ್ಟಿಲ್ಲ ಇವರಿಗೆ ಯಾವ ಕಾಳಜಿ ಇದೆ ತೋರಿಸಲಿ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ನಾಗಮೋಹನ ದಾಸ್ ವರದಿಯನ್ನು ಜಾರಿಗೆ ಕೊಡುತ್ತೇವೆ ಎಂದು ಹೇಳಿದ್ದರು ಅದೇಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.

ಸಿ.ಟಿ ರವಿ ಎಂದರೆ ಸುಳ್ಳಿನ ರವಿ

ಮೂಡಿಗೆರೆ ಕ್ಷೇತ್ರದಲ್ಲಿ ನಯನ ಮೋಟಮ್ಮ ಅವರಿಗೆ ಟಿಕೆಟ್ ಕೊಡುವ ಸಂಬಂಧ ಪಕ್ಷದಲ್ಲೇ ಅಪಸ್ವರ ಇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿ ಆಂತರಿಕ ಪ್ರಜಾಪ್ರಭುತ್ವ ಇರುತ್ತದೆ ಅಲ್ಲಿ ಇದೆಲ್ಲಾ ಇರುತ್ತದೆ. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ. ಸಿ.ಟಿ.ರವಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಿ.ಟಿ.ರವಿ ಎಂದರೆ ಸುಳ್ಳಿನ ರವಿ ಎಂದರ್ಥ ಅದಕ್ಕೆ ನಾನು ಸುಮ್ಮನಿದ್ದೇನೆ ಎಂದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!