ಮುಂಬರುವ ಜಿಪಂ, ತಾಪಂ, ವಿಧಾನಸಭಾ ಚುನಾವಣೆ ಗೆಲುವಿಗೆ ಕಾರ್ಯಕರ್ತರು ನಿರಂತರ ಶ್ರಮವಹಿಸಿ ; ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮನವಿ

0
303

ರಿಪ್ಪನ್‌ಪೇಟೆ: ಪ್ರಸ್ತುತ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹೊಸ್ತಿಲಲ್ಲಿದ್ದೇವೆ. ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಸಂಘಟನೆ ಇನ್ನಷ್ಟು ಚುರುಕುಗೊಳ್ಳಬೇಕಿದೆ. ಬೂತ್‌ಗಳನ್ನು ಸಶಕ್ತೀಕರಣಗೊಳಿಸಲು ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಕಾರ್ಯವನ್ನು ಇನ್ನಷ್ಟು ವೇಗವಾಗಿ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಮತ್ತು ಪಕ್ಷ ಚುನಾಯಿತ ಜನಪ್ರತಿನಿಧಿಗಳು ನಿರಂತರವಾಗಿ ಶ್ರಮಿಸಿ ಪ್ರವಾಸ ಕೈಗೊಂಡು ಬೂತ್‌ಗಳನ್ನು ಸದೃಢಗೊಳಿಸಬೇಕಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.

ಸಮೀಪದ ನೆವಟೂರು ಗ್ರಾಮದ ಬಿಜೆಪಿ ಬೂತ್ ಮಟ್ಟದ ಸಭೆಯು ದೇವೇಂದ್ರಪ್ಪಗೌಡರ-ಮನೆಯ ಆವರಣದಲ್ಲಿ ಆಯೋಜಿಸಲಾಗಿದ್ದು ಈ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಿಜೆಪಿ ಮಹಾಶಕ್ತಿಕೇಂದ್ರದವರು ಬಸವಾಪುರ, ಹಾರೋಹಿತ್ತಲು, ಆಲವಳ್ಳಿ, ಗವಟೂರು, ಕೋಡೂರು ಇನ್ನಿತರ ಗ್ರಾಮಗಳಲ್ಲಿನ ಬೂತ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತು ರಾಜ್ಯದಲ್ಲಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪ್ರಧಾನಮಮತ್ರಿ ಗರೀಬ್ ಕಲ್ಯಾಣ ಯೋಜನೆಯನ್ವಯ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಸಾಮಗ್ರಿಗಳ ಪೊರೈಕೆ. ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 3 ಕೋಟಿಗೂ ಅಧಿಕ ಮನೆ ನಿರ್ಮಾಣಕ್ಕೆ ಅನುಮೋದನೆ, ಹರ್-ಘರ್-ನಲ್-ಸೆ-ಜಲ್ ಯೋಜನೆಯಡಿಯಲ್ಲಿ ಹೊಸ ಮನೆಗಳಿಗೆ ಕೊಳವೆ ನೀರು ಸಂಪರ್ಕ, ಸ್ವನಿಧಿ ಯೋಜನೆಯಡಿ 29 ಲಕ್ಷ ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲಸೌಲಭ್ಯ, ಆಯುಷ್ಮಾನ್ ಯೋಜನೆ ವಿಶ್ವದ 190 ಕೋಟಿಗೂ ಅಧಿಕ ಜನರಿಗೆ ಕೊರೊನಾ ಲಸಿಕೆ ನೀಡಿದ ಭಾರತ ದೇಶದ ಹೆಗ್ಗಳಿಕೆ ಕಿಸಾನ್ ಸ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ನೇರ ಹಣ ಸಂದಾಯ, ಬೆಳೆ ವಿಮೆ, ಕಿಸಾನ್ ಕ್ರೆಡಿಟ್ ಕಾರ್ಡ್, ಹೀಗೆ ಹತ್ತು ಹಲವು ಅಭಿವೃದ್ದಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು ಅದೇ ರೀತಿಯಲ್ಲಿ ರಾಜ್ಯದ ಸರ್ಕಾರ ಸಹ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು ಈ ಯೋಜನೆಯ ಕುರಿತು ಕಾರ್ಯಕರ್ತರು ಮನೆಮನೆಗೆ ತಲುಪಿಸಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.

ಈ ಸಭೆಯಲ್ಲಿ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮೃಜುನಾಥ, ತಾಲ್ಲೂಕ್ ಬಿಜೆಪಿ ಅಧ್ಯಕ್ಷ ಗಣಪತಿ ಬಿಳಗೋಡು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದಿ ನಿಗಮದ ನಿರ್ದೇಶಕ ಎನ್.ಆರ್.ದೇವಾನಂದ, ಜಿಲ್ಲಾ ಬಿಜೆಪಿ ಮುಖಂಡರಾದ ಎ.ಟಿ.ನಾಗರತ್ನ ನಾಗರಾಜ್, ಬಿ.ಯುವರಾಜ್, ಎ.ವಿ.ಮಲ್ಲಿಕಾರ್ಜುನ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ದೇವೇಂದ್ರಪ್ಪಗೌಡ ನೆವಟೂರು, ಗಿರೀಶ್‌ಜಂಬಳ್ಳಿ, ಕೆ.ಬಿ.ಹೂವಪ್ಪ, ಎಂ.ಸುರೇಶ್‌ಸಿಂಗ್, ಮೆಣಸೆ ಆನಂದ, ತರಕಾರಿ ಯೋಗೇಂದ್ರಗೌಡರು, ತೀರ್ಥೇಶ್, ವಾಸುಶೆಟ್ಟಿ ಗವಟೂರು ಇನ್ನಿತರ ಪಕ್ಷದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here