20.6 C
Shimoga
Friday, December 9, 2022

ಮೂಡಿಗೆರೆ ; ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ !

ಮೂಡಿಗೆರೆ: ನಯನ ಮೋಟಮ್ಮಗೆ ಟಿಕೆಟ್ ನೀಡಿದ್ದಂತೆ ಸಭೆ ಸೇರಿ ನಯನ ಮೋಟಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ ಉಂಟಾಗಿದೆ.

ಮುಂಬರುವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮೋಟಮ್ಮ ಕುಟುಂಬಕ್ಕೆ ಬೇಡವೆಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವಸ್ತಾರೆಯಲ್ಲಿ ಕಾಂಗ್ರೆಸ್‌ ಮುಖಂಡರು ಸಭೆ ಸೇರಿ ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಮೋಟಮ್ಮ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

ನಯನ ಮೋಟಮ್ಮಗೆ ಟಿಕೆಟ್ ನೀಡಿದರೆ ಕೈ ಅಭ್ಯರ್ಥಿ ಸೋಲು ಖಚಿತವಾಗುತ್ತದೆ ಎನ್ನುವುದು ಅಸಮಾಧಾನಗೊಂಡ ಮುಖಂಡರ ವಾದ. ಮುಂದಿನ ದಿನಗಳಲ್ಲಿ ನಯನ ಮೋಟಮ್ಮಗೆ ಟಿಕೆಟ್ ನೀಡದಂತೆ ಕೆಪಿಸಿಸಿಗೆ ಮನವಿ ಜಿಲ್ಲಾ ಮುಖಂಡರು ಮನವಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಮೋಟಮ್ಮ ಅವರನ್ನೇ ಕ್ಷೇತ್ರದ ಜನರು ಒಪ್ಪುತ್ತಿಲ್ಲ, ಇನ್ನು ನಯನ ಅವರನ್ನು ಒಪ್ಪುವುದು ದೂರದ ಮಾತು. ಕ್ಷೇತ್ರದಲ್ಲಿ ಐದು ಬಾರಿ ಸೋಲು ಕಂಡಿರುವ ಮೋಟಮ್ಮ ನಾನು ರಾಜಕೀಯದಿಂದ ನಿವೃತ್ತಿಯಾಗಿದ್ದೇನೆ ಎಂದಿದ್ದಾರೆ. ಅವರ ಮಗಳಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುವುದು ಗ್ಯಾರಂಟಿ ಎಂದು ಹಲವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು. ಈ ಬಾರಿ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಕಳೆದ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೂ ಮೂಡಿಗೆರೆ ಕ್ಷೇತ್ರದಿಂದ ಮೋಟಮ್ಮ ಅವರಿಗೆ ಅವಕಾಶ ನೀಡಬಾರದು ಎಂದು ಹಲವು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೂ ಕಾಂಗ್ರೆಸ್ ಹೈಕಮಾಂಡ್ ಮೋಟಮ್ಮ ಅವರಿಗೆ ಟಿಕೆಟ್ ನೀಡಿತ್ತು. 46,271 ಮತ ಪಡೆದಿದ್ದ ಮೋಟಮ್ಮ ಸೋಲನುಭವಿಸಿದ್ದರು. ಜೆಡಿಎಸ್ ಅಭ್ಯರ್ಥಿ ಬಿ.ಬಿ.ನಿಂಗಯ್ಯ 22,063 ಮತಗಳನ್ನು ಪಡೆದಿದ್ದರು. ಹಾಲಿ ಶಾಸಕ ಬಿಜೆಪಿಯ ಎಂ.ಪಿ.ಕುಮಾರಸ್ವಾಮಿ 58,783 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಬಾರಿಯೂ ಬಿಜೆಪಿಯಿಂದ ಕುಮಾರಸ್ವಾಮಿ ಅವರೇ ಮೂಡಿಗೆರೆಯಲ್ಲಿ ಸ್ಪರ್ಧಿಸಬಹುದು ಎಂಬ ಮಾತುಗಳು ಪ್ರಬಲವಾಗಿವೆ.

ಜಿ.ಪಂ ಮಾಜಿ ಸದಸ್ಯರು, ಗ್ರಾ.ಪಂ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!