20.6 C
Shimoga
Friday, December 9, 2022

ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಎನ್.ಆರ್ ನಾಗರತ್ನ ಅರ್ಜಿ

ಮೂಡಿಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷವು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ರೂ. 5 ಸಾವಿರ ಅರ್ಜಿಶುಲ್ಕ ಮತ್ತು ಸಾಮಾನ್ಯ ಕ್ಷೇತ್ರಗಳಿಗೆ ರೂ. 2 ಲಕ್ಷ ಠೇವಣಿ ಹಾಗೂ ಮೀಸಲು ಕ್ಷೇತ್ರಗಳಿಗೆ ರೂ. 1 ಲಕ್ಷ ಠೇವಣಿಯೊಂದಿಗೆ ಅರ್ಜಿ ಆಹ್ವಾನಿಸಿದೆ.

ಅದರಂತೆ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಎನ್.ಆರ್. ನಾಗರತ್ನ ಅರ್ಜಿ ಸಲ್ಲಿಸಿದ್ದಾರೆ. 5 ಸಾವಿರ ಅರ್ಜಿ ಶುಲ್ಕ ಹಾಗೂ ರೂ. 1 ಲಕ್ಷ ಠೇವಣಿಯೊಂದಿಗೆ ಅರ್ಜಿ ಸಲ್ಲಿಸಿರುವ ನಾಗರತ್ನ ಈ ಬಾರಿ ಪಕ್ಷದಿಂದ ಟಿಕೆಟ್ ಪಡೆಯುವ ನಿರೀಕ್ಷೆ ಹೊಂದಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಯಾಗಿರುವ ಇವರು ಕಳೆದ ಎರಡು ಚುನಾವಣೆಗಳಿಂದಲೂ ಕ್ಷೇತ್ರದಲ್ಲಿ ಇವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಒಮ್ಮೆ ಬಣಕಲ್ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪಮತಗಳ ಅಂತರದಿಂದ ಪರಾಭವಗೊಂಡಿದ್ದರು.

ನಾಗರತ್ನ ಮೂಡಿಗೆರೆ ಮೇಗಲಪೇಟೆಯಲ್ಲಿರುವ ನವರತ್ನ ಪೆಟ್ರೋಲ್ ಬಂಕ್ ಮಾಲೀಕರಾಗಿದ್ದು, ಇವರ ಪತಿ ಕೆಂಚಪ್ಪ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕರಾಗಿ ಸ್ವಯಂ ನಿವೃತ್ತಿ ಪಡೆದಿದ್ದಾರೆ.

ಎನ್.ಆರ್. ನಾಗರತ್ನ ಅವರು ನವರತ್ನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಿ ಅದರ ಮೂಲಕ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಸೇರಿದಂತೆ ವಿವಿಧ ಸಮಾಜಸೇವಾ ಕಾರ್ಯದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!