ಮೆಟ್ರಿಕ್ ನಂತರದ ಕೋರ್ಸ್‌ಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ: ಕೆ. ಮಂಜಪ್ಪ

0
267

ಹೊಸನಗರ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಕ್ಷಣ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಅಧಾರ್ ಜೋಡಣೆಯಾಗಿದೆಯೇ ಎಂದು ಪರೀಕ್ಷಿಸಿಕೊಳ್ಳಿ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾದಿಕಾರಿ ಕೆ. ಮಂಜಪ್ಪನವರು ತಿಳಿಸಿದ್ದಾರೆ.

ಅವರು ತಮ್ಮ ಕಛೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, 2021-22ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ವಸತಿ, ಯೋಜನೆ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದ್ದು ದಿನಾಂಕ: 30-11-2021ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಆದ ಕಾರಣ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಬ್ಯಾಂಕ್ ಪಾಸ್ ಪುಸ್ತಕಕ್ಕೆ ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಬೇಕೆಂದರು.

2020-21ರಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಬಂದಿಲ್ಲ ಎಂದು ಪೋಷಕರು ನಮ್ಮಲ್ಲಿ ದೂರು ದಾಖಲಿಸಿದ್ದು ಅದರೆ ವಿದ್ಯಾರ್ಥಿಗಳ ಶಿಷ್ಯ ವೇತನ ಸರ್ಕಾರದಿಂದ ಮಂಜೂರಾತಿಯಾಗಿದ್ದರೂ ಬ್ಯಾಂಕ್ ಖಾತೆಗೆ ಅದಾರ್ ಜೋಡಣೆಯಾಗಿಲ್ಲದಿರುವುದರಿಂದ ಶಿಷ್ಯ ವೇತನದ ಹಣ ಖಾತೆಗೆ ಬ್ಯಾಂಕ್ ಜಮಾವಾಗಿಲ್ಲ ಎಂದರು.

ಬ್ಯಾಂಕ್‌ಗಳು ಸಹಕರಿಸಿ:

ವಿದ್ಯಾರ್ಥಿಗಳು ಆಲ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಮಯ ಕಡಿಮೆ ಇರುವುದರಿಂದ ಎಲ್ಲ ಬ್ಯಾಂಕ್‌ಗಳು ವಿದ್ಯಾರ್ಥಿಗಳಿಗೆ ಸಹಕರಿಸಬೇಕು ತಕ್ಷಣ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಅದಾರ್ ಜೋಡಣೆ ಮಾಡಿಕೊಡಬೇಕೆಂದು ಹೊಸನಗರ ತಾಲ್ಲೂಕಿನಲ್ಲಿರುವ ಎಲ್ಲ ಬ್ಯಾಂಕ್ ವ್ಯವಸ್ಥಾಪಕರಿಗೆ ಹಾಗೂ ಸಿಬ್ಬಂದಿಗಳಿಗೆ ಈ ಸಂದರ್ಭದಲ್ಲಿ ಮನವಿ ಮಾಡಿದರು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಈಗಾಗಲೇ ಆನ್‌ಲೈನ್‌ನಲ್ಲಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುತ್ತಿದ್ದು ಆನ್‌ಲೈನ್ ಅರ್ಜಿಗಳನ್ನು ಪಡೆಯುತ್ತಿದ್ದೇವೆ ಆದರೆ ನಿಮಗೆ ಶಿಷ್ಯ ವೇತನ ಬ್ಯಾಂಕ್ ಪುಸ್ತಕಕ್ಕೆ ಜಮಾ ಆಗಬೇಕಾದರೆ ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಕೊಂಡರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾವಾಗುತ್ತದೆ. ಆದ್ದರಿಂದ ತಕ್ಷಣ ಎಲ್ಲ ವಿದ್ಯಾರ್ಥಿಗಳು ನಿಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿಕೊಳ್ಳಬೇಕೆಂದರು.

ಜಾಹಿರಾತು

LEAVE A REPLY

Please enter your comment!
Please enter your name here