23.2 C
Shimoga
Sunday, November 27, 2022

ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ವಿಭಜಿಸುವಂತೆ ಸರ್ಕಾರಕ್ಕೆ ಮನವಿ

ರಿಪ್ಪನ್‌ಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬಿಸಿಡಬ್ಲ್ಯಡಿ 2347 ಈ ನಿಲಯವು 170 ಕ್ಕೂ ಹೆಚ್ಚಿನ ಸಂಖ್ಯಾ ಬಲದ ಮಂಜೂರಾತಿ ಹೊಂದಿದ್ದು ಸ್ವಂತ ಕಟ್ಟಡವನ್ನು ಹೊಂದಿದೆ. ಸದರಿ ವಿದ್ಯಾರ್ಥಿನಿಲಯದಲ್ಲಿ ಪದವಿ ಪೂರ್ವ ಐಟಿಐ ಮತ್ತು ಪದವಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಈ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ಕಷ್ಟಸಾಧ್ಯವಾಗಿದೆ ಆದ್ದರಿಂದ 100 ಸಂಖ್ಯಾ ಬಲದ ಎರಡು ವಿದ್ಯಾರ್ಥಿನಿಲಯಗಳನ್ನಾಗಿ ವಿಭಜಿಸುವಂತೆ ವಿವರಿಸಿ ಸರ್ಕಾರಕ್ಕೆ ಶಾಸಕರು ಪ್ರಸ್ತಾವನೆ ಸಲ್ಲಿಸಿದ್ದಾರೆ.


ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ರಿಪ್ಪನ್‌ಪೇಟೆಯ ಬರುವೆ ಗ್ರಾಮದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಈಗಾಗಲೇ ಪದವಿ ವಿದ್ಯಾರ್ಥಿಗಳು ಸೇರಿದಂತೆ ಪದವಿ ಪೂರ್ವ ಮತ್ತು ಐಟಿಐ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಮಂಜೂರಾತಿ ಸಂಖ್ಯೆಗಿಂತ ಹೆಚ್ಚುವರಿ ವಿದ್ಯಾರ್ಥಿನಿಯರು ವಸತಿ ನಿಲಯಕ್ಕೆ ಅರ್ಜಿ ಸಲ್ಲಿಕೆಯಾಗುತ್ತಿದ್ದು ಆ ಕಾರಣದಿಂದಾಗಿ ಈ ವಿದ್ಯಾರ್ಥಿನಿಲಯವನ್ನು ವಿಭಜಿಸಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯ ಮಂಜೂರು ಮಾಡುವುದರಿಂದಾಗಿ ಪದವಿ ಐಟಿಐ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ತೊಂದರೆಯಾಗದಂತೆ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳ ವ್ಯಾಸಂಗಕ್ಕೂ ಅನುಕೂಲವಾಗುವುದೆಂಬ ಉದ್ದೇಶದಿಂದಾಗಿ ವಿಭಜಿಸುವುದು ಸೂಕ್ತ ಎಂದು ಸರ್ಕಾರಕ್ಕೆ ಮನವರಿಕೆ ಮಾಡುವುದರೊಂದಿಗೆ ಶಾಸಕ ಹರತಾಳು ಹಾಲಪ್ಪನವರು ಸಂಬಂಧಿಸಿದ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!