ಮೆಟ್ರಿಕ್ ಪೂರ್ವ ಅಥವಾ ನಂತರದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅನ್‍ಲೈನ್ ಅರ್ಜಿ ಆಹ್ವಾನ

0
335

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿಗೆ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯಗಳ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ/ನಂತರದ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಅರ್ಜಿ ಅಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಂತರ್ಜಾಲ ತಾಣ https://scholarships.gov.in ರಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ದಿ: 15.11‌.2021 ಹಾಗೂ ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ದಿ:30.11.2021 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಧರ್ಮಪ್ಪ. ಟಿ, ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 2ನೇ ಮಹಡಿ, ಜಿ.ಪಂ.ಕಟ್ಟಡ, ಕುವೆಂಪು ರಸ್ತೆ ಶಿವಮೊಗ್ಗ ಇಲ್ಲಿ ಖುದ್ದಾಗಿ ಅಥವಾ ವೆಬ್‍ಸೈಟ್ www.dom.karnataka.gov.in/shivamogga/public ಅಥವಾ ಶಿವಮೊಗ್ಗ ದೂ. ಸಂ: 08182-220206, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ 9538853680, ತೀರ್ಥಹಳ್ಳಿ: 8050479764, ಶಿಕಾರಿಪುರ: 7829252130, ಸಾಗರ ಮತ್ತು ಹೊಸನಗರ – 9686268804, ಸೊರಬ: 9513815513 ಗಳನ್ನು ಕಚೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here