ಮೇ 31ರಂದು ಸೇವಾ ಸುಶಾಸನ ಬಡವರ ಕಲ್ಯಾಣ ಹಾಗೂ ರಾಜ್ಯ ಪ್ರಕೋಷ್ಟಗಳ ಜಿಲ್ಲಾ ಸಮಾವೇಶ

0
104

ಚಿಕ್ಕಮಗಳೂರು: ಸೇವಾ ಸುಶಾಸನ ಬಡವರ ಕಲ್ಯಾಣ ಹಾಗೂ ರಾಜ್ಯ ಪ್ರಕೋಷ್ಟಗಳ ಜಿಲ್ಲಾ ಸಮಾವೇಶಗಳ ಸಮಾರೋಪ ಸಮಾರಂಭ ಮೇ 31ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯ ಮ ಪ್ರಮುಖ್ ಕವಿತಾ ಶೇಖರ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕಲಬುರ್ಗಿ ಯಲ್ಲಿ ಸಮಾವೇಶ ಉದ್ಘಾಟಿಸಲಾಗಿದ್ದು, ಸಮಾರೋಪ ಸಮಾರಂಭ ಇಲ್ಲಿ ನಡೆಯಲಿದೆ ಎಂದು ಹೇಳಿದರು.

ಈ ಸಮಾರೋಪವನ್ನು ಬಿಜೆಪಿ ಮುಖಂಡ ಭಾನುಪ್ರಕಾಶ್ ಉದ್ಘಾಟಿಸಲಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಉಪಸ್ಥಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಚ್. ಸಿ. ಕಲ್ಮುರಡಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿರವರು 8 ವರ್ಷ ತಮ್ಮ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದು, ಜನಸಾಮಾನ್ಯರಿಗೆ ಉಪಯುಕ್ತವಾಗುವ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ.

ಕೋವಿಡ್ ಸಂದರ್ಭವನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಸೇವಾ ಸುಶಾಸನ ಬಡವರ ಕಲ್ಯಾಣ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಬಿಜೆಪಿ ಮುಖಂಡ ಬಿ. ರಾಜಪ್ಪ, ರಾಮಸ್ವಾಮಿ, ಜಸಿಂತಾ ಅನಿಲ್ ಕುಮಾರ್, ವೀಣಾ ರತ್ನಾಕರ ಶೆಟ್ಟಿ ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here