ಮೈಸೂರು – ತಾಳಗುಪ್ಪ ರೈಲಿಗೆ ಸಿಲುಕಿ ಮಹಿಳೆ ಸಾವು!

0
5116

ಶಿವಮೊಗ್ಗ: ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಮಹಿಳೆ ಸಾವಿಗೀಡಾದ ಘಟನೆ ಇಂದು ನಡೆದಿದೆ.

ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿ ರೈಲು ಹಳಿ ದಾಟುವಾಗ ನಾಗರತ್ನ ಬಾಯಿ (46) ಎಂಬಾಕೆ ಸಾವಿಗೀಡಾಗಿದ್ದಾರೆ.

ಹಳಿ ದಾಟುವಾಗ ಚಲಿಸುತ್ತಿರುವ ರೈಲು ಹೊಡೆದು ರೈಲಿನ ವೇಗಕ್ಕೆ ಮಹಿಳೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ.

ನಾಗರತ್ನ ಬಾಯಿ ಖಾಸಗಿ ಆಸ್ಪತ್ರೆಯಲ್ಲಿ ಆಯ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಶಾಮನಾಯ್ಕ ಎಂಬುವರೊಂದಿಗೆ ವಿವಾಹವಾಗಿದ್ದ ನಾಗರತ್ನ ಬಾಯಿ, ಒಂದು ವರ್ಷದಿಂದ ಗಂಡನಿಂದ ದೂರವಾಗಿದ್ದರು.

ಈ ಘಟನೆ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here