ಮೊಮ್ಮಗಳನ್ನು ನೋಡಿಕೊಂಡು ಬರಲು ಹೋದಾಗ ನಡೆಯಿತು ದುರಂತ ; ಕಾರು ಮರಕ್ಕೆ ಡಿಕ್ಕಿ ಹೊಡೆದು ಇಂಜಿನಿಯರ್ ಸ್ಥಳದಲ್ಲೇ ಸಾವು !!

0
686

ಶಿಕಾರಿಪುರ: ತಾಲ್ಲೂಕಿನ ಹಾರೋಗೊಪ್ಪ ಗ್ರಾಮದ ಬಿ ಕ್ಯಾಂಪ್ ಸಮೀಪದ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಅಶೋಕ್ (60) ಮೃತ ವ್ಯಕ್ತಿ. ಅಶೋಕ್ ಅವರು ಮಂಗಳವಾರ ಜನಿಸಿದ್ದ ಮೊಮ್ಮಗಳನ್ನು ನೋಡಿಕೊಂಡು ಬರಲು ಕುಟುಂಬ ಸದಸ್ಯರೊಂದಿಗೆ ಶಿವಮೊಗ್ಗಕ್ಕೆ ತೆರಳಿದ್ದರು. ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಅಶೋಕ್ ಪತ್ನಿ ಕಮಲಮ್ಮ, ವಾಹನ ಚಾಲನೆ ಮಾಡುತ್ತಿದ್ದ ಪುತ್ರ ಈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿಜಯಕುಮಾರ್ ಹಾಗೂ ಗಂಗಾಧರ್ ಅವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕಾರಿನಲ್ಲಿದ್ದ ವಿಜಯಕುಮಾರ್ ಅವರ ಒಂದೂವರೆ ವರ್ಷದ ಪುತ್ರನಿಗೆ ಗಾಯಗಳಾಗಿಲ್ಲ.

ಮೃತ ವ್ಯಕ್ತಿ ಅಶೋಕ್ ಅವರು ಈ ತಿಂಗಳ ಅಂತ್ಯಕ್ಕೆ ನಿವೃತ್ತಿ ಹೊಂದಲಿದ್ದರು.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here