ಯಡಿಯೂರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಬವಿಸಲ್ಲ: ಕೆ.ಎಸ್.ಈಶ್ವರಪ್ಪ

0
392

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಬವಿಸಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ತಾವು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿರುವ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಸಿದ್ಧರಾಮಯ್ಯ ಅವರನ್ನು ಜನ ತಿರಸ್ಕರಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನ ಸೋಲಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನೇ ಸಿದ್ಧರಾಮಯ್ಯ ಕಳೆದುಕೊಂಡಿದ್ದಾರೆ. ಈಗ ಇಂತಹ ವಿಚಾರಕ್ಕೆ ಸಿ.ಎಂ.ರಾಜೀನಾಮೆ ಕೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭ ವಿಸಲ್ಲ. ತುರ್ತಾಗಿ ಮುಖ್ಯಮಂತ್ರಿಯಾಗಬೇಕೆಂಬ ಸಿದ್ಧರಾಮಯ್ಯನವರ ಕನಸು ಈಡೇರಲ್ಲ ಅಂತಹ ಭ್ರಮೆಯನ್ನು ಅವರು ಇಟ್ಟುಕೊಳ್ಳುವುದು ಬೇಡ ಎಂದರು.

ಉಪಚುನಾವಣೆಯಲ್ಲಿ ಪತ್ರದ ವಿಚಾರ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿಲ್ಲ. ಇದಿಲ್ಲ ಎಂದರೆ ಇನ್ನೊಂದು ಅಸ್ತçವನ್ನು ತೆಗೆದು ಕೊಳ್ಳುತ್ತಿದ್ದರು. ಬಿಜೆಪಿ ಸಂಘಟನೆ ಪ್ರಬಲವಾಗಿದೆ. ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಮತ ಯಾಚಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಸಿ.ಎಂ.ಯಡಿಯೂರಪ್ಪ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಜನ ಸರ್ಕಾರಗಳ ಜೊತೆಗಿದ್ದಾರೆ. ಹಾಗಾಗಿ ಪ್ರತಿ ಪಕ್ಷಗಳಿಗೆ ಟೀಕಿಸಲು ಬೇರೆ ಅಸ್ತ್ರವಿಲ್ಲದೆ ರಾಜ್ಯಪಾಲರ ಭೇಟಿ ವಿಚಾರವನ್ನೇ ಪ್ರಸ್ತಾಪಿಸಿ ಗೊಂದಲ ಸೃಷ್ಠಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತಾತ್ಮಕ ವಿಚಾರವಾಗಿ ಸಣ್ಣಪುಟ್ಟ ವ್ಯತ್ಯಾಸಗಳಾಗಿದ್ದು, ಅವುಗಳನ್ನು ಸರಿಪಡಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ. ಬೇರೆ ಇಲಾಖೆಗಳಲ್ಲಿ ಈ ರೀತಿ ಆಗಿದೆಯೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ನಾನು ನನ್ನ ಇಲಾಖೆಯಲ್ಲಿ ಗಮನಿಸಿದ್ದರಿಂದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಪಕ್ಷದ ನಾಯಕರ ಗಮನಕ್ಕೆ ತಂದಿದ್ದು, ಪಕ್ಷದ ವರಿಷ್ಟರು ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯಲಿದೆ ಎಂದು ವಿಶ್ವಾಸವಿದೆ ಎಂದರು.

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೇ.2 ರ ನಂತರ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಯತ್ನಾಳ್ ಈ ರೀತಿ ಹೇಳುತ್ತಲೇ ಇರುತ್ತಾರೆ ಎಂದರು.

ಅವರ ಪ್ರಕಾರ ಹಿಂದುತ್ವವಾದಿ ಉತ್ತಮವಾದ ಗೋಶಾಲೆ ಮಾಡಿದ್ದು, ಸಾವಿರಾರು ಗೋವುಗಳನ್ನು ಆರೈಕೆ ಮಾಡುತ್ತಿದ್ದಾರೆ. ಅವರ ಹೇಳಿಕೆಗಳ ಬಗ್ಗೆ ಕೇಂದ್ರ ನಾಯಕರು ಗಮನಿಸುತ್ತಾರೆ ಎಂದು ಹೇಳಿದರು.

ಜಾಹಿರಾತು

LEAVE A REPLY

Please enter your comment!
Please enter your name here