ಯಾವುದೇ ತಪ್ಪು ಮಾಡದ ಈಶ್ವರಪ್ಪ ಅನಿವಾರ್ಯವಾಗಿ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ; ಯಡಿಯೂರಪ್ಪ

0
226

ಶಿವಮೊಗ್ಗ : ಯಾವುದೇ ತಪ್ಪು ಮಾಡದ ಈಶ್ವರಪ್ಪ, ಈ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಅನಿವಾರ್ಯವಾಗಿ, ಸಚಿವ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ನಗರಕ್ಕೆ ಆಗಮಿಸಿರುವ ಬಿ.ಎಸ್.ವೈ. ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ತಪ್ಪು ಮಾಡದ ಈಶ್ವರಪ್ಪ, ಈ ಪ್ರಕರಣದಲ್ಲಿ ಸಿಲುಕಿಕೊಂಡು ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ. ಯಾವುದೋ ಒತ್ತಾಯಕ್ಕಾಗಿ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಯಾವುದೇ‌ ಅಪರಾಧವಿಲ್ಲದೇ ಇದ್ದರೂ, ರಾಜೀನಾಮೆ ನೀಡುವಂತಾಗಿದೆ ಎಂದು ಹೇಳಿದರು.

ಸಚಿವ ಈಶ್ವರಪ್ಪ ಮುಂದಿನ ದಿನಗಳಲ್ಲಿ ಪ್ರಕರಣ ಎದುರಿಸುತ್ತಾರೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಇನ್ನೆರಡು ತಿಂಗಳಲ್ಲಿ ತನಿಖೆ ಮುಗಿದರೆ, ಇವರ ಪಾತ್ರವೇನೂ ಇಲ್ಲ ಎಂಬುದು ತಿಳಿಯಲಿದೆ. ಅವರು ನಿರಪರಾಧಿಯಾಗಿ ಹೊರಗೆ ಬರುತ್ತಾರೆ. ಆಗ ಅವರಿಗೆ ಸಂಪುಟದಲ್ಲಿ ಸೇರಿಸಿಕೊಳ್ಳಲು ಯಾವುದೇ ಅಡ್ಡಿ ಇಲ್ಲ. ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಹಿನ್ನಡೆಯಾಗಲ್ಲ. ದೇವರು ಅವರಿಗೆ ಒಳ್ಳೆಯದು ಮಾಡಲಿ. ಮತ್ತೆ ಅವರು ಸಂಪುಟ ಸೇರಿಕೊಳ್ಳುತ್ತಾರೆ ಎಂದು ಹೇಳಿದರು.

ಜಾಹಿರಾತು

LEAVE A REPLY

Please enter your comment!
Please enter your name here