ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ ಮಾಡಲು ಕೃಷಿ ಇಲಾಖೆಯಿಂದ ಸೂಚನೆ

0
427

ಚಿಕ್ಕಮಗಳೂರು: ಕೃಷಿ ಇಲಾಖೆ ವತಿಯಿಂದ ರಸಗೊಬ್ಬರ ದರ ಏರಿಕೆ ಕುರಿತು ರಸಗೊಬ್ಬರ ಮಾರಾಟಗಾರರು ತಮ್ಮಲ್ಲಿ ದಾಸ್ತಾನು ಇರುವ ಹಾಲಿ ರಸಗೊಬ್ಬರವನ್ನು ಹಳೆಯ ದರಗಳಲ್ಲಿ ಮಾರಾಟ ಮಾಡಬೇಕಾಗಿರುತ್ತದೆ ಹಾಗೂ ರೈತರಿಗೆ ಕಡ್ಡಾಯವಾಗಿ ಜಿ.ಎಸ್.ಟಿ ರಶೀದಿಯನ್ನು ನೀಡಬೇಕು. ತಪ್ಪಿದ್ದಲ್ಲಿ ರಸಗೊಬ್ಬರ ನಿಯಂತ್ರಣ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಅಧಿಕಾರಿಗಳು ಹೇಳಿದ್ದಾರೆ.

ರೈತರು ರಸಗೊಬ್ಬರ ಚೀಲದ ಮೇಲಿರುವ ಎಂ.ಆರ್.ಪಿ ದರದಲ್ಲಿ ರಸಗೊಬ್ಬರವನ್ನು ಖರೀದಿಸುವುದು ಹಾಗೂ ಜಿ.ಎಸ್.ಟಿ ಬಿಲ್ ಅನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಚೀಲದ ಮೇಲೆ ನಮೂದಿಸಿರುವ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರಿಗೆ ದೂರು ನೀಡಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ತಿರುಮಲೇಶ್ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here