ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನಗಳ ನಿಲುಗಡೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ !

0
519

ಮೂಡಿಗೆರೆ: ಸರಣಿ ರಜೆಗಳ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಇಂದು ಪ್ರವಾಸಿಗರ ದಂಡೇ ಹರಿದು ಬಂದಿದೆ.

ನೈಸರ್ಗಿಕ, ಧಾರ್ಮಿಕ ಪ್ರವಾಸಿ ಸ್ಥಳಗಳಿಗೆ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಬಂದಿದ್ದು, ಎಲ್ಲಿ ನೋಡಿದರಲ್ಲಿ ವಾಹನಗಳು ಹಾಗೂ ಪ್ರವಾಸಿಗರು ಕಾಣಸಿಗುತ್ತಿದ್ದರು.

ಇಂದು ಮಧ್ಯಾಹ್ನದ ಬಳಿಕ ಪ್ರವಾಸಿಗರು ಹಿಂದಿರುಗುತ್ತಿದ್ದು, ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುತ್ತಿದ್ದುದರಿಂದ ಸಂಚಾರ ಸಮಸ್ಯೆ ಎದುರಾಗಿತ್ತು. ಕೊಟ್ಟಿಗೆಹಾರ ಸಾಲಂತೂ ಕಂಡಕಂಡಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಹೈರಾಣಾದರು.

ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಬೇಕಾದ ಪೊಲೀಸರು ಇತ್ತ ತಲೆ ಹಾಕದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ಹೊರಹಾಕಿದರು.

ಅನೇಕ ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೆ ಬೇಕಾದಲ್ಲಿ ವಾಹನ ನಿಲ್ಲಿಸಿದ್ದರಿಂದಲೂ ಉಳಿದ ವಾಹನ ಸವಾರರಿಗೆ ತೊಂದರೆಯಾಯಿತು.

ಸ್ಥಳಕ್ಕೆ ಪೋಲಿಸರು ಬಾರದಿರುವ ಬಗ್ಗೆ ಸ್ಥಳೀಯರು ಆಕ್ಷೇಪಿಸಿದ್ದಲ್ಲದೆ ಕೆಲ ಯುವಕರು ಮುಂದೆ ನಿಂತು ಸಂಚಾರ ವ್ಯವಸ್ಥೆಯನ್ನು ಸರಿಪಡಿಸಲು ಪ್ರಯತ್ನಿಸಿದ್ದು ಈ ಸಂದರ್ಭದಲ್ಲಿ ಕಾಣಿಸಿತು.

ಜಾಹಿರಾತು

LEAVE A REPLY

Please enter your comment!
Please enter your name here