ರಸ್ತೆಯ ಮಧ್ಯದಲ್ಲಿ ಆಟೋ ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಆರೋಪ

0
1655

ಚಿಕ್ಕಮಗಳೂರು : ರಸ್ತೆಯ ಮಧ್ಯದಲ್ಲಿ ಆಟೋ ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.

ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು 4-5 ಆಟೋ ಮಾಲೀಕರು ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ.

ಚಿಕ್ಕಮಗಳೂರು ನಗರದ ತೊಗರಿಹಂಕಲ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ಚಪ್ಪಲಿ ಕಾಲಲ್ಲಿ ಒದ್ದ ಎಂದು ಆಟೋ ಚಾಲಕರೂ ಆರೋಪ ಮಾಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ಕಂಡಕ್ಟರ್ ನಗರ ಠಾಣೆಗೆ ದೂರು ನೀಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here