ರಸ್ತೆ ಅಭಿವೃದ್ದಿಯಾಗದ ಹಿನ್ನೆಲೆ: ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ ಗ್ರಾಮಸ್ಥರು !

0
241

ಮೂಡಿಗೆರೆ: ಬಣಕಲ್ ಗುಡ್ಡಟಿ ರಸ್ತೆ ಅಭಿವೃದ್ದಿಗೆ ಮುಂದಾಗದೇ ಇರುವುದನ್ನು ವಿರೋಧಿಸಿ ಬಣಕಲ್ ಗ್ರಾ.ಪಂ ವ್ಯಾಪ್ತಿಯ ಕೆಲ ಗ್ರಾಮಗಳ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.

ಕಳೆದ 2 ದಶಕಗಳಿಂದ ಬಣಕಲ್ ಗುಡ್ಡಟ್ಟಿ ರಸ್ತೆ ಅಭಿವೃದ್ದಿಯಾಗದ ಹಿನ್ನಲೆಯಲ್ಲಿ ಬಣಕಲ್ ಗ್ರಾ.ಪಂ ವ್ಯಾಪ್ತಿಯ ಸುಭಾಷ ನಗರ, ಕುವೆಂಪು ನಗರ, ನರಿಗುಡ್ಡೆ, ಹೊರಟ್ಟಿ ಹಾಗೂ ಗುಡ್ಡಟ್ಟಿಯ ಗ್ರಾಮಸ್ಥರು ಕುವೆಂಪುನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ಮುಖಂಡರಾದ ಬಿ.ಎಂ ಭರತ್, ವಿಕ್ರಂ, ಅನುಕುಮಾರ್, ಗ್ರಾ.ಪಂ ಅಧ್ಯಕ್ಷ ಸತೀಶ್ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಲು ಯತ್ನಿಸಿದರು.

ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡಗುಂಡಿಗಳಿಂದ ಕೂಡಿದೆ. ರಸ್ತೆ ಅಭಿವೃದ್ದಿ ಮಾಡುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.

ಹಲವು ವರ್ಷ ಕಳೆದರೂ ಭರವಸೆ ಪೂರ್ಣಗೊಂಡಿಲ್ಲ. ಕಳೆದ ಚುನಾವಣೆ ಸಂದರ್ಭದಲ್ಲೂ ಗ್ರಾ.ಪಂ ಚುನಾವಣೆಯಲ್ಲಿ ಭರವಸೆ ನೀಡಿ ಹೋದವರೂ ರಸ್ತೆ ಅಭಿವೃದ್ದಿಗೆ ಮುಂದಾಗಿಲ್ಲ. ಈ ಬಾರಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದೇವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಬಣಕಲ್ ಹೋಬಳಿ ಬಿಜೆಪಿ ಅಧ್ಯಕ್ಷ ಅನುಕುಮಾರ್ ನೀಡಿದ ಭರವಸೆಗೆ ಮನ್ನಣೆ ನೀಡದ ಗ್ರಾಮಸ್ಥರು, ರಸ್ತೆ ಅಭಿವೃದ್ದಿ ಕಾಮಗಾರಿ ಪ್ರಾರಂಭವಾಗುವವರೆಗೂ ಚುನಾವಣೆ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳುವುದಿಲ್ಲ, ಮತದಾನ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here