ಚಿಕ್ಕಮಗಳೂರು: ರಸ್ತೆಗಳಲ್ಲಿ ಬ್ಲಾಕ್ ಸ್ಪಾಟ್ಗಳ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.
ತಮ್ಮ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚು ಸಂಭವಿಸುತ್ತಿದ್ದು ಅಂತಹ ವಲಯಗಳನ್ನು ಗುರುತಿಸಿ ಆ ಸ್ಥಳವು ಬ್ಲಾಕ್ ಸ್ಪಾಟ್ ಪಟ್ಟಿಯಲ್ಲಿ ಇಲ್ಲದಿದ್ದರೂ ಸಹ ಅಪಘಾತವನ್ನು ನಿಯಂತ್ರಿಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕು ರಸ್ತೆಗೆ ಸಂಬಂಧಿಸಿದ ಇತರೆ ಕಾಮಗಾರಿಗಳನ್ನು ಸಹ ವಿಳಂಬವಾಗದ ರೀತಿಯಲ್ಲಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಮೂಡಿಗೆರೆ ಮತ್ತು ಕಡೂರು ತಾಲ್ಲೂಕಿನಲ್ಲಿ ಟ್ರೋಮಾ ಸೆಂಟರ್ಗಳು 2 ಮಾತ್ರ ಇದ್ದು, ರಸ್ತೆ ಸುರಕ್ಷತೆಯಲ್ಲಿ ಟ್ರೋಮಾ ಸೆಂಟರ್ಗಳು ತುಂಬಾ ಮುಖ್ಯವಾಗಿದ್ದು, ಇನ್ನೂ ಹೆಚ್ಚಿನ ಟ್ರೋಮಾ ಸೆಂಟರ್ಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೆಚ್ಚು ಅಪಘಾತ ವಲಯಗಳಿವೆ ಎಂಬುದರ ಬಗ್ಗೆ ಸಮೀಕ್ಷೆ ಕೈಗೊಂಡು ಸ್ಥಳಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯವಿರುವ ಪ್ರದೇಶಗಳಲ್ಲಿ ಟ್ರೋಮಾ ಸೆಂಟರ್ಗಳನ್ನು ಪ್ರಾರಂಭಿಸುವಂತೆ ತಿಳಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್.ಎಂ.ಹೆಚ್ ಮಾತನಾಡಿ, ಜಿಲ್ಲೆಯಲ್ಲಿ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿ ಕಾಮಗಾರಿ ಪೂರ್ಣಗೊಳಿಸಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಮುಖ್ಯವಾಗಿ ರಸ್ತೆಯ ತಿರುವುಗಳಲ್ಲಿ ಮುಖ್ಯವಾಗಿ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಪಘಾತಗಳನ್ನು ಕಡಿಮೆಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಒಟ್ಟು 21ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿದ್ದು, ಇವುಗಳ ಕಾಮಗಾರಿ ಪೂರ್ಣಗೊಂಡಿದ್ದರೂ ಸಹ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಸರಿಯಾದ ಯೋಜನೆ ರೂಪಿಸಿ ಕಾಮಗಾರಿ ನಿರ್ವಹಿಸಿಲ್ಲ. ಬ್ಲಾಕ್ ಸ್ಪಾಟ್ಗಳನ್ನು ಕಡಿಮೆಯಾಗಿ ಇನ್ನಷ್ಟು ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ಮುಖ್ಯ ರಸ್ತೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವುದಕ್ಕಿಂತ ಮುಖ್ಯವಾಗಿ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಹಾಗೂ ಹಂಪ್ಸ್ಗಳನ್ನು ಅಳವಡಿಸುವುದರ ಮೂಲಕ ಅಪಘಾತಗಳನ್ನು ನಿಯಂತ್ರಿಸಬಹುದು,
ಮುಖ್ಯ ರಸ್ತೆಗಳಿಗೆ ಹಳ್ಳಿಗಳನ್ನು ಸಂಪರ್ಕಿಸುವ ಕಡೆಗಳಲ್ಲಿ ಹಂಪ್ಸ್ಗಳನ್ನು ಅಳವಡಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
