ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ: ಅಭಿನಂದನೆ

0
509

ಶಿಕಾರಿಪುರ: ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದ್ದ ಕಾರಣ ರಾಜ್ಯ ಸರ್ಕಾರಿ ನೌಕರರ ಸಂಘ ಶಿಕಾರಿಪುರ ತಾಲ್ಲೂಕು ಘಟಕದ ಸರ್ವ ಸದಸ್ಯರ ವತಿಯಿಂದ ಅಭಿನಂದನೆಯನ್ನು ಸೂಚಿಸಲಾಗಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಹೆಚ್.ಡಿ ಮಧುಕೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಸಂತೋಷ ಹಂಚಿಕೊಂಡ ಅವರು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿಭತ್ಯೆಯನ್ನು ದಿನಾಂಕ 01- 07-2021 ರಿಂದ ಅನ್ವಯವಾಗುವಂತೆ ಶೇಕಡಾ 3% ರಷ್ಟು ತುಟ್ಟಿಭತ್ಯೆಯನ್ನ ಹೆಚ್ಚಳ ಮಾಡುವಂತೆ ಆದೇಶ ಹೊರಡಿಸಿದೆ. ಈ ಹೆಚ್ಚಳದಿಂದ ಮೂಲ ವೇತನದ ಶೇಕಡಾ 21.50 ರಷ್ಟಿದ್ದ ತುಟ್ಟಿಭತ್ಯೆ ಶೇಕಡಾ 24.50 ಯಷ್ಟು ಹೆಚ್ಚಳ ಆಗಲಿದೆ. ಇದರಿಂದಾಗಿ ರಾಜ್ಯದ 6 ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರಿಗೆ, 4.50 ಲಕ್ಷಪಿಂಚಣಿದಾರರಿಗೆ, 3 ಲಕ್ಷ ನಿಗಮ ಮಂಡಳಿಗಳ ನೌಕರರಿಗೆ ಅನುಕೂಲವಾಗುವಾಗಲಿದೆ ಎಂದರು.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿಭತ್ಯೆಗೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರ ಸಂಘವು ಮನವಿ ಸಲ್ಲಿಸಿದ ನಂತರ ಕೇವಲ 24 ಗಂಟೆಯೊಳಗೆ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಇದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರಿಗೆ ರಾಜ್ಯ ಸರ್ಕಾರದ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ವಿಶೇಷವಾಗಿ ಸಂಘದ ರಾಜ್ಯಾಧ್ಯಕ್ಷರಾದ ಸಿ ಎ‌ಸ್ ಷಡಾಕ್ಷರಿರವರಿಗೆ, ರಾಜ್ಯ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಅಧಿಕಾರಿಗಳಿಗೂ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ತಾಲ್ಲೂಕು ಸಂಘವು ಹಾರ್ಧಿಕ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಬಸನಗೌಡ ಕೊಣ್ತಿ, ಖಜಾಂಚಿ ಪಿ ಎಸ್ ಕೇಶವ, ನಿರ್ದೇಶಕರಾದ ಪುರುಷೋತ್ತಮ್, ಡಿ.ಆರ್ ಹುವೇಶ ನಾಯ್ಕ್, ರಾಮಚಂದ್ರ, ಈರಮ್ಮ, ವಿಶ್ವನಾಥ್ ಸೇರಿದಂತೆ ಅನೇಕರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here