ರಾಷ್ಟ್ರಪತಿ ಭೇಟಿ ಹಿನ್ನೆಲೆ ಅಂಗಡಿ ಮುಂಗಟ್ಟು ಬಂದ್ ಮಾಡಲು ಜಿಲ್ಲಾಡಳಿತ ಆದೇಶ, ವ್ಯಾಪಾರಸ್ಥರ ಆಕ್ರೋಶ

0
870

ಶೃಂಗೇರಿ: ಶುಕ್ರವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ನೀಡಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೇಟಿ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈಗಾಗಲೇ ನಷ್ಟ ಅನುಭವಿಸಿರುವ ವ್ಯಾಪಾರಸ್ಥರು ನವರಾತ್ರಿ ಸಂದರ್ಭದಲ್ಲಿ ಮತ್ತೆ 2 ದಿನ ಅಂಗಡಿ ಮುಂಗಟ್ಟು ಮುಚ್ಚಲು ಆದೇಶ ನೀಡಿರುವುದಕ್ಕೆ ಆಕ್ರೋಶ ಹೊರಹಾಕಿದ್ದು, ಎರಡು ದಿನದ ನಷ್ಟವನ್ನು ಕಟ್ಟಿಕೊಡುವಂತೆ ಆಗ್ರಹಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here