ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

0
340

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ದಿ: 10/08/2022 ರಂದು “ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ”ದ ಅಂಗವಾಗಿ ಜಿಲ್ಲೆಯಾದ್ಯಂತ 01 ರಿಂದ 19 ವರ್ಷದ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆ “ಅಲ್ಬೆಂಡಝೋಲ್”ನ್ನು ಉಚಿತವಾಗಿ ವಿತರಿಸಲಾಗುವುದು.

ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳಲ್ಲಿ ಮತ್ತು ಪದವಿ ಪೂರ್ವ ಕಾಲೇಜು, ಐ.ಟಿ.ಐ. ಕಾಲೇಜ್, ಟೆಕ್ನಿಕಲ್ ಕಾಲೇಜ್, ನರ್ಸಿಂಗ್ ಕಾಲೇಜ್, ಪ್ರಥಮ ಬಿ.ಎ.ಕಾಲೇಜ್, ಮೆಡಿಕಲ್ ಕಾಲೇಜ್ ಮತ್ತು ಆಯುರ್ವೇದಿಕ್ ಕಾಲೇಜುಗಳಲ್ಲಿ ಉಚಿತವಾಗಿ ನೀಡಲಾಗುವುದು. ಹಾಗೂ ಈ ವಯಸ್ಸಿನ ಶಾಲೆ ಬಿಟ್ಟ ಮಕ್ಕಳಿಗೆ ಸಂಬಂಧಪಟ್ಟ ಅಂಗನವಾಡಿಗಳಲ್ಲಿ ಉಚಿತವಾಗಿ ವಿತರಿಸಲಾಗುವುದು.

ಜಿಲ್ಲೆಯ ಎಲ್ಲಾ 1-19 ವರ್ಷದ ಮಕ್ಕಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆಯುವಂತೆ ಪೋಷಕರುಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜಾಹಿರಾತು

LEAVE A REPLY

Please enter your comment!
Please enter your name here