ರಿಪ್ಪನ್‌ಪೇಟೆ; ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯೊಂದಿಗೆ ಪ್ರತಿಭಟನೆ

0
611

ರಿಪ್ಪನ್‌ಪೇಟೆ: ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ ಅವಧಿಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಗವಟೂರು ಗ್ರಾಮದಲ್ಲಿ 05 ಎಕರೆ ಜಮೀನು ಮಂಜೂರು ಮಾಡಲಾಗಿದ್ದರೂ ಕೂಡಾ ಕ್ಷೇತ್ರದ ಶಾಸಕರು ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಮೂಲಕ ಸಮುದಾಯ ಆಸ್ಪತ್ರೆಯನ್ನಾಗಿಸಿ ತಜ್ಞ ವೈದ್ಯಾಧಿಕಾರಿಗಳನ್ನು ಮತ್ತು ಸಿಬ್ಬಂದಿವರ್ಗ ಹಾಗೂ ಸಮುದಾಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಇಂದು ಗವಟೂರು ಬಳಿಯಿಂದ ಮೂರು ಕಿ.ಮೀ. ದೂರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದವರು ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರಿಗೆ ಅಭಿವೃದ್ದಿಗಿಂತ ಹಣ ಮಾಡುವುದೇ ಗುರಿಯನ್ನಾಗಿಸಿಕೊಂಡಿದ್ದಾರೆ ಮತ್ತು ಐಟಿಐ ಕಾಲೇಜ್ ಕಟ್ಟಡ ಕಾಮಗಾರಿ ಪೂರ್ಣವಾಗಿದ್ದರೂ ಉದ್ಘಾಟನೆ ಮಾಡದೇ ಇರುವುದು ಮತ್ತು ಹೊಸನಗರ ಎಪಿಎಂಸಿಯನ್ನು ಸಾಗರ ಎಪಿಎಂಸಿಗೆ ನಿಯೋಜಿಸುವ ಬಗ್ಗೆ ಹೋರಾಟ ನಡೆಸುವ ಎಚ್ಚರಿಕೆಯಿಂದಾಗಿ ತಕ್ಷಣ ತಡೆಹಿಡಿದಿದ್ದು ಅಂತಹ ಯಾವುದೇ ಕ್ರಮಕ್ಕೆ ಮುಂದಾದರೆ ಉಗ್ರ ಪ್ರತಿಭಟನೆ ನಡೆಸುವು ಎಚ್ಚರಿಕೆ ನೀಡಿ, ತಕ್ಷಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸುವುದರೊಂದಿಗೆ ಸರ್ಕಾರದಿಂದ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಪ್ರತಿಭಟನಾ ಸಭೆಯಲ್ಲಿ ಒತ್ತಾಯಿಸಿದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಮುಖಂಡ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಕಲಗೋಡು ರತ್ನಾಕರ್, ಆರ್.ಎಂ.ಮಂಜುನಾಥಗೌಡ ಕಾಂಗ್ರೆಸ್ ಮುಖಂಡರಾದ ರಾಜಾನಂದಿನಿ, ಜಿ.ಪಂ. ಮಾಜಿ ಸದಸ್ಯರಾದ ಶ್ವೇತಾ, ರಾಮಚಂದ್ರ ಬಂಡಿ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯೆ ಬಿ.ಜಿ.ಚಂದ್ರಮೌಳಿ, ಗೌರಮ್ಮ ತಳಲೆ, ಹೋಬಳಿ ಘಟಕದ ಅಧ್ಯಕ್ಷ ಆಸಿಫ್, ಅಮ್ಮೀರ್‌ಹಂಜಾ, ಡಿ.ಈ.ಮಧುಸೂದನ್ ಇನ್ನಿತರರು ಹಾಜರಿದ್ದರು.

ಡಿ.ಈ.ಮಧುಸೂದನ್ ಸ್ವಾಗತಿಸಿದರು. ಆಸಿಫ್ ವಂದಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here